ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು, ಫೆಬ್ರವರಿ 14: ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್‌ ಪಡೆ ಭರ್ಜರಿಯಾಗಿ ತಯಾರಿ ನಡೆಸಿದೆ. ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ಹೌದು, ರಾಜ್ಯಸಭೆ ದೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮೂವರು ನಾಯಕರು ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದಿಂದ ಅಜಯ್ ಮಾಕೆನ್, ಡಾ. ಸೈಯದ್ ನಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರನ್ನ ಕಣಕ್ಕಳಿಸಿ, ಅಧಿಕೃತವಾಗಿ ಬುಧವಾರ ಕಾಂಗ್ರೆಸ್‌ ಹೈಕಮಾಂಡ್‌ ಘೋಷಣೆ ಮಾಡಿದೆ.

ಇನ್ನೂ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯದಿಂದ ಮೂವರನ್ನ ರಾಜ್ಯಸಭಾ ಅಭ್ಯರ್ಥಿಗಳನ್ನಾಗಿ ಕಣಕ್ಕಳಿಸಿದ್ದು, ನಾಸಿರ್ ಹುಸೇನ್ ಅವರು ಮಲ್ಲಿಕಾರ್ಜುನ ಖರ್ಗೆ ಆಪ್ತರಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಜಿ ಸಿ ಚಂದ್ರಶೇಖರ್‌ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಸಿಎಂ ಡಿಕೆ ಶಿವಕುಮಾರ್ ಅಭ್ಯರ್ಥಿಯಾಗಿದ್ದಾರೆ ಎನ್ನಲಾಗಿದೆ. ಅಜೇಯ್ ಮಾಕನ್ ಹೈಕಮಾಂಡ್ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಬ್ಬರಿಗೆ ಮತ್ತೆ ಅವಕಾಶ ನೀಡಿದೆ. ಇನ್ನೊಂದು ಸ್ಥಾನಕ್ಕೆ ಹೊಸ ಮುಖಕ್ಕೆ ಮಣೆ ಹಾಕಿದೆ. ಜಿ.ಸಿ.ಚಂದ್ರಶೇಖರ್‌ ಮತ್ತು ನಾಸೀರ್ ಹುಸೇನ್‌ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್‌ ನೀಡಿದೆ. ಇನ್ನು ಎಐಸಿಸಿ ಖಜಾಂಚಿ ಅಜಯ್‌ ಮಕೇನ್‌ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಲಾಗಿದೆ. ಇತ್ತ ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್‌ಕುಮಾರ್‌ ಯಾದವ್‌ಗೆ ಟಿಕೆಟ್‌ ಸಿಕ್ಕರೆ, ಮಧ್ಯಪ್ರದೇಶದಲ್ಲಿ ಅಶೋಕ್‌ ಸಿಂಗ್‌ಗೆ ಟಿಕೆಟ್‌ ಘೋಷಿಸಲಾಗಿದೆ.

Previous Post
ಗುಜರಾತ್‌ ನಿಂದ ಜೆ ಪಿ ನಡ್ಡಾ, ಕಾಂಗ್ರೆಸ್‌ ಸೇರಿದ್ದ ನಾಯಕನಿಗೆ ಮಹಾರಾಷ್ಟ್ರದಿಂದ ಟಿಕೆಟ್
Next Post
ಉತ್ತರ ಪ್ರದೇಶ: ಬುಂದೇಲ್‌ಖಂಡ್ ಪಟಾಕಿ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮಕ್ಕಳು

Recent News