ಕಾಂಗ್ರೆಸ್ನ INDIA ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ!
ನವದೆಹಲಿ, ಫೆಬ್ರವರಿ 15: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಪಂಜಾಬ್, ಪಶ್ಚಿಮ ಬಂಗಾಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೈತ್ರಿ ಮುರಿದುಬಿದ್ದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ INDIA ಮೈತ್ರಿಕೂಟದ ಜೊತೆ ಸೇರುವುದಿಲ್ಲ ಪಕ್ಷ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಗುರುವಾರ ಘೋಷಣೆ ಮಾಡಿದೆ. ಇದರಿಂದಾಗಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ.
ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಗುರುವಾರ ಈ ಕುರಿತು ಘೋಷಣೆ ಮಾಡಿದರು. ರಾಜ್ಯದಲ್ಲಿ 6 ಲೋಕಸಭಾ ಕ್ಷೇತ್ರಗಳಿದ್ದು, ನ್ಯಾಷನಲ್ ಕಾನ್ಫರೆನ್ಸ್ INDIA ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳದೇ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿದೆ.
“ಯಾವುದೇ ಪಕ್ಷದೊಂದಿಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳದೇ ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಏಕಾಂಗಿಯಾಗಿ ಪಕ್ಷ ಎದುರಿಸಲಿದೆ” ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು. ಈ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸೀಟು ಹಂಚಿಕೆ ಮಾತುಕತೆಗೆ ತೆರೆ ಎಳೆದರು.
“ಸೀಟು ಹಂಚಿಕೆ ಬಗ್ಗೆ ನಾನು ಈಗಲೇ ಸ್ಪಷ್ಟನೆ ನೀಡುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ. ಇದರಲ್ಲಿ ಯಾವುದೇ ಎರಡನೇ ಮಾತಿಲ್ಲ, ಮುಂದಿನ ದಿನಗಳಲ್ಲೂ ಈ ಬಗ್ಗೆ ಯಾವುದೇ ಮಾತು ಇಲ್ಲ” ಎಂದು ಫಾರೂಕ್ ಅಬ್ದುಲ್ಲಾ ಸ್ಪಷ್ಟಪಡಿಸಿದರು. “ಸೀಟು ಹಂಚಿಕೆ ಬಗ್ಗೆ ನಾನು ಈಗಲೇ ಸ್ಪಷ್ಟನೆ ನೀಡುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ. ಇದರಲ್ಲಿ ಯಾವುದೇ ಎರಡನೇ ಮಾತಿಲ್ಲ, ಮುಂದಿನ ದಿನಗಳಲ್ಲೂ ಈ ಬಗ್ಗೆ ಯಾವುದೇ ಮಾತು ಇಲ್ಲ” ಎಂದು ಫಾರೂಕ್ ಅಬ್ದುಲ್ಲಾ ಸ್ಪಷ್ಟಪಡಿಸಿದರು. ಫಾರೂಕ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮೂರು ಬಾರಿಯ ಮುಖ್ಯಮಂತ್ರಿ. ಅವರ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ INDIA ಮೈತ್ರಿಕೂಟ ಪ್ರಮುಖ ಅಂಗಪಕ್ಷವಾಗಿತ್ತು. ಮೈತ್ರಿಕೂಟದ ಎಲ್ಲಾ ಸಭೆಯಲ್ಲಿಯೂ ಅವರು ಪಾಲ್ಗೊಂಡಿದ್ದರು. ಗುರುವಾರ INDIA ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಇಲ್ಲ ಎಂದು ಘೋಷಣೆ ಮಾಡಿರುವ ಫಾರೂಕ್ ಅಬ್ದುಲ್ಲಾ ತಮ್ಮ ಈ ನಿರ್ಧಾರಕ್ಕೆ ಕಾರಣವೇನು? ಎಂಬುದನ್ನು ವಿಸ್ತಾರವಾಗಿ ತಿಳಿಸಿಲ್ಲ. “ಮುಂದಿನ ದಿನಗಳಲ್ಲಿಯೂ ಮೈತ್ರಿ ಇಲ್ಲ” ಎಂದು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕಳೆದ ತಿಂಗಳು ಫಾರೂಕ್ ಅಬ್ದುಲ್ಲಾ INDIA ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದರು. ಈಗ ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕ್ರಿಕೆಟ್ ಅಸೋಶಿಯೇಷನ್ನಲ್ಲಿ ನಡೆದ ಅನುದಾನ ಹಂಚಿಕೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೂಕ್ ಅಬ್ದುಲ್ಲಾಗೆ ಕೆಲವು ದಿನಗಳ ಹಿಂದೆ ಇಡಿ ನೋಟಿಸ್ ಜಾರಿ ಮಾಡಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಎಎಪಿ, ಟಿಎಂಸಿ ಸಹ ಘೋಷಣೆ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ದೆಹಲಿ, ಪಂಜಾಬ್ನಲ್ಲಿ ಎಎಪಿ INDIA ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೆಲವು ದಿನಗಳ ಹಿಂದೆ ಘೊಷಣೆ ಮಾಡಿದ್ದವು. ಈಗ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ INDIA ಮೈತ್ರಿಕೂಟ ರಚನೆ ಮಾಡಿಕೊಂಡಿವೆ. ಆದರೆ ಸೀಟುಗಳ ಹಂಚಿಕೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.