ಚುನಾವಣಾ ದಿನಾಂಕ ಬಿಡುಗಡೆಗೂ ಮುನ್ನ ಯುಪಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ?

ಚುನಾವಣಾ ದಿನಾಂಕ ಬಿಡುಗಡೆಗೂ ಮುನ್ನ ಯುಪಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ?

ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡುವ ಮೊದಲು ಉತ್ತರ ಪ್ರದೇಶದಲ್ಲಿ ಬಿಜೆಪಿ ತನ್ನ “ದುರ್ಬಲ ಕ್ಷೇತ್ರಗಳಿಗೆ” ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಪಕ್ಷವು ಕಠಿಣ ಚುನಾವಣಾ ಸವಾಲನ್ನು ಎದುರಿಸಬಹುದಾದ ದುರ್ಬಲ ಸ್ಥಾನಗಳ ಕುರಿತು ಚರ್ಚೆ ನಡೆಸಿದರು, ಹೆಚ್ಚಿನ ತಯಾರಿ, ಪ್ರಚಾರದ ಅಗತ್ಯ ಹಿನ್ನಲೆ ಈ ನಿರ್ಧಾರಕ್ಕೆ‌ ಚಿಂತಿಸಿದೆ.

ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್ ಮತ್ತು ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜ್ಯದ ಕೋರ್ ಕಮಿಟಿಯ ಇತರ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಯಿತು. 2019 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಅದರ ಎನ್‌ಡಿಎ ಮಿತ್ರಪಕ್ಷ ಅಪ್ನಾ ದಳ ಎರಡು ಸ್ಥಾನಗಳನ್ನು ಗೆದ್ದಿತ್ತು.

ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಕುರಿತು ಆಪ್ ಇಂಡಿಯಾ ಬ್ಲಾಕ್ ಪಕ್ಷಗಳಾದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಒಪ್ಪಂದಕ್ಕೆ ಬಂದ ಕೆಲವು ದಿನಗಳ ನಂತರ ಪಕ್ಷದ ಸಭೆ ನಡೆಯಿತು. ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಉಳಿದ 63 ಸ್ಥಾನಗಳು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಇತರ ಮೈತ್ರಿ ಪಾಲುದಾರರ ಪಾಲಾಗಲಿವೆ.

Previous Post
‘ಇಂಡಿಯಾ’ ಮೈತ್ರಿಕೂಟದಲ್ಲಿ ಮತ್ತೆ ಮಿಂಚು
Next Post
ಕಾಶಿ ಕಾರಿಡಾರ್ ಉದ್ಘಾಟನೆ ಬಳಿಕ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ

Recent News