ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಅಮೇಥಿ ಕ್ಷೇತ್ರದಿಂದ ಮತ್ತೆ ರಾಹುಲ್‌ ಗಾಂಧಿ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಯ್‌ಬರೇಲಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು. ರಾಹುಲ್ ಗಾಂಧಿ ಅವರು 2019 ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಹೀನಾಯ ಸೋಲನುಭವಿಸಿದ್ದರು. ಈಗ ಮತ್ತೆ ಅದೇ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂದು ಮೂಲಗಳು ಹೇಳಿವೆ.

ಈ ಬಾರಿ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿದರೆ ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಪೈಪೋಟಿ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈ ಕಣ ಮತ್ತೆ ಗಮನ ಸೆಳೆಯಲಿದೆ. ಬಿಜೆಪಿ ಈಚೆಗೆ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಅಮೇಥಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ.

ಅಮೇಥಿ ಜೊತೆಗೆ ರಾಹುಲ್‌ ಗಾಂಧಿ ಕೇರಳದ ವಯನಾಡಿನಿಂದಲೂ ಮತ್ತೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆ ಸ್ಥಾನಮಾನ ಉಳಿಸಿಕೊಳ್ಳಲು ರಾಹುಲ್‌ ಗಾಂಧಿಗೆ ವಯನಾಡು ಅವಕಾಶ ಮಾಡಿಕೊಟ್ಟಿತ್ತು. ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿಯವರ ಪ್ರವೇಶ ಬಹುನಿರೀಕ್ಷಿತ. ಅವರ ತಾಯಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2019 ಸೇರಿದಂತೆ ಈ ಹಿಂದೆ ಐದು ಬಾರಿ ಗೆದ್ದಿರುವ ರಾಯ್‌ಬರೇಲಿಯಿಂದ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ.

Previous Post
ಮೋದಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸಂದೇಶ್‌ಖಾಲಿ ಮಹಿಳೆಯರಿದ್ದ ಬಸ್‌ಗಳಿಗೆ ತಡೆ
Next Post
ದೇಶದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗ ಲೋಕಾರ್ಪಣೆ

Recent News