ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಆರ್ ಅಶೋಕ್, ಅಶ್ವಥ್ ನಾರಯಣ್ ಸಮರ್ಥರು ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅಚ್ಚರಿಯ ಹೇಳಿಕೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಆರ್ ಅಶೋಕ್, ಅಶ್ವಥ್ ನಾರಯಣ್ ಸಮರ್ಥರು ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅಚ್ಚರಿಯ ಹೇಳಿಕೆ

ನವದೆಹಲಿ : ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕೂಡಾ ಸ್ಪರ್ಧೆ ಮಾಡಬಹುದು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

ಕ್ಷೇತ್ರದಲ್ಲಿ ನಡೆದ ಮೈತ್ರಿ ಮಾತುಕತೆ ಸಂಬಂಧ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಡಾ. ಮಂಜುನಾಥ್ ಅವರ ಹೆಸರು ಪ್ರಸ್ತಾಪಿಸಿದ್ದೇನೆ, ಅವರನ್ನು ಒಪ್ಪಿಸುವ ಜವಬ್ದಾರಿ ನನ್ನದು ಎಂದು ಹೇಳಿದ್ದೇನೆ ಎಂದರು.

ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ, ನಾನು ರಾಜ್ಯ ರಾಜಕಾರಣದಲ್ಲಿ ಇರಬೇಕು ಅಂತ ಅಂದುಕೊಂಡಿದ್ದೇನೆ ಹೀಗಾಗೀ ನಾನು ಸ್ಪರ್ಧಿಸುವ ಆಸಕ್ತಿ ಇಲ್ಲ ಹೀಗಾಗೀ ನಾನು ಮಂಜುನಾಥ್ ಹೆಸರು ಪ್ರಸ್ತಾಪಿಸಿದ್ದೇನೆ, ಕೆಲವು ನಾಯಕರು ನಾನು ಸ್ಪರ್ಧಿಸಿದರೆ ಕಠಿಣ ಪೈಪೊಟಿ ಇರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ

ಮಂಜುನಾಥ್ ಅವರನ್ನು ಹೊರತುಪಿಡಿಸದರೂ ಅಶ್ವಥ್ ನಾರಾಯಣ್ ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದರು, ಆರ್ ಅಶೋಕ್ ವಿರೋಧ ಪಕ್ಷದ ನಾಯಕರು ಸ್ಪರ್ಧಿಸಲು ಸಮರ್ಥರಿದ್ದಾರೆ. ಅಂತಿಮವಾಗಿ ಪಕ್ಷದ ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕು ಎಂದರು.

Previous Post
ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ
Next Post
ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ರಾಜ್ಯ ಕೋರ್ ಕಮಿಟಿ ನಾಯಕರೊಂದಿಗೆ ಜೆ.ಪಿ ನಡ್ಡಾ ಸಭೆ

Recent News