10 ಹೈಸ್ಪೀಡ್ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

10 ಹೈಸ್ಪೀಡ್ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಗಾಂಧಿನಗರ: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗುಜರಾತ್‌ನ ಅಹಮದಾಬಾದ್‌ನಿಂದ ದೇಶದಾದ್ಯಂತ 10 ಹೈಸ್ಪೀಡ್ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಕಲಬುರಗಿ-ಬೆಂಗಳೂರು ನಡುವಿನ ವಂದೇ ಭಾರತ್‌ ರೈಲಿಗೂ ಇದೇ ವೇಳೆ ಚಾಲನೆ ಸಿಕ್ಕಿತು.

ರೈಲ್ವೇ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ವಲಯಕ್ಕೆ ಪ್ರಮುಖ ಉತ್ತೇಜನ ನೀಡುವ ಸಲುವಾಗಿ ಅಹಮದಾಬಾದ್‌ನಲ್ಲಿರುವ ಡಿಎಫ್‌ಸಿಯ ಆಪರೇಷನ್ ಕಂಟ್ರೋಲ್ ಸೆಂಟರ್‌ಗೆ ಭೇಟಿ ನೀಡಿದ ಪ್ರಧಾನಿಗಳು ಶಂಕುಸ್ಥಾಪನೆ ನೆರವೇರಿಸಿದ್ದಾರೆ. 1,06,000 ಕೋಟಿ ರೂ. ಮೌಲ್ಯದ ರೈಲ್ವೆ ಮತ್ತು ಪೆಟ್ರೋಕೆಮಿಕಲ್ಸ್ ಯೋಜನೆಗಳಿಗೆ ಚಾಲನೆ ಕೊಟ್ಟರು.

ಅಹಮದಾಬಾದ್‌-ಮುಂಬೈ ಸೆಂಟ್ರಲ್‌, ಸಿಕಂದರಾಬಾದ್‌-ವಿಶಾಖಪಟ್ಟಣಂ, ಮೈಸೂರು-ಡಾ.ಎಂಜಿಆರ್‌ ಸೆಂಟ್ರಲ್‌ (ಚೆನ್ನೈ), ಪಾಟ್ನಾ-ಲಕ್ನೋ, ನ್ಯೂ ಜಲ್ಪೈಗುರಿ-ಪಾಟ್ನಾ, ಪುರಿ-ವಿಶಾಖಪಟ್ಟಣಂ, ಲಕ್ನೋ-ಡೆಹ್ರಾಡೂನ್‌, ಕಲಬುರಗಿ-ಸರ್‌. ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು, ರಾಂಚಿ-ವಾರಣಾಸಿ, ಖಜುರಾಹೊ-ದೆಹಲಿ ನಡುವಿನ 10 ಹೊಸ ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಕಲಬುರಗಿ-ಬೆಂಗಳೂರು ನಡುವಿನ ವಂದೇ ಭಾರತ್ ರೈಲು ವಾರದ 6 ದಿನಗಳಲ್ಲಿ ಸಂಚರಿಸಲಿದೆ. ಈ‌ ಮೂಲಕ ಕಲಬುರಗಿ ಜಿಲ್ಲೆಯ ಜನರ ಹಲವು ದಿನಗಳ ಕನಸು ನನಸಾಗಿದೆ.

Previous Post
ಲೋಕಸಭೆಗೆ ಮಲ್ಲಿಕಾರ್ಜುನ್ ಖರ್ಗೆ ಸ್ಪರ್ಧೆ ಅನುಮಾನ
Next Post
ಹರಿಯಾಣ ಮುಖ್ಯಮಂತ್ರಿ ಎಂ.ಎಲ್.ಖಟ್ಟರ್ ರಾಜೀನಾಮೆ

Recent News