ಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ ಸಾಧನ – ರಾಹುಲ್ ಗಾಂಧಿ ಆರೋಪ

ಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ ಸಾಧನ – ರಾಹುಲ್ ಗಾಂಧಿ ಆರೋಪ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಕೆಲವೇಕೆಲವು ಶ್ರೀಮಂತ ಉದ್ಯಮಿಗಳ ಸಾಧನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ನೈಜ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯುವುದು, ಭಾರತದ ಶ್ರೀಮಂತ ಉದ್ಯಮಿಗಳನ್ನು ರಕ್ಷಿಸುವುದು ಮತ್ತು ಅವರ ಬ್ಯಾಂಕ್ ಸಾಲಗಳನ್ನು ಮನ್ನಾ ಮಾಡುವುದು ಮೋದಿಯವರ ಕೆಲಸ ಎಂದು ಅವರು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಐದಾರು ದೊಡ್ಡ, ಶ್ರೀಮಂತ ಉದ್ಯಮಿಗಳ ಸಾಧನ; ದೇಶದ 20-25 ಜನರಿಗೆ ಸುಮಾರು 16 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ” ಎಂದು ಅವರು ಕಿಡಿಕಾರಿದರು. ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ನಿರುದ್ಯೋಗ ಅಥವಾ ಬೆಲೆ ಏರಿಕೆಯ ಬಗ್ಗೆ ಅವರು ಮಾತನಾಡುವುದಿಲ್ಲ” ಎಂದು ಪಕ್ಷದ ಬೆಂಬಲಿಗರು, ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಇಂದು ತಮ್ಮ ಸ್ವಕ್ಷೇತ್ರ ವಯನಾಡಿನಲ್ಲಿ ಮಾತನಾಡಿದರು.

ಚುನಾವಣಾ ಬಾಂಡ್‌ಗಳು ಪಿಎಂ ಮೋದಿ ನಡೆಸಿದ ಸುಲಿಗೆಯ ಒಂದು ರೂಪವಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನವನ್ನು ನಾಶಪಡಿಸಲು ಮತ್ತು ಬದಲಾಯಿಸಲು ಪ್ರಯತ್ನಿಸುತ್ತಿವೆ. 2024 ರ ಲೋಕಸಭೆ ಚುನಾವಣೆಯ ಏಕೈಕ ದೊಡ್ಡ ವಿಷಯ ಮತ್ತು ಇತರ ಎಲ್ಲ ವಿಷಯಗಳು ಅದರಿಂದ ಹೊರಹೊಮ್ಮಿವೆ’ ಎಂದು ಹೇಳಿದರು.

ಅವರು ದಕ್ಷಿಣ ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿ ಬೆಳಿಗ್ಗೆ 11.30 ರ ಸುಮಾರಿಗೆ ಇಲ್ಲಿನ ಕೇರಳದ ಕೊಡಿಯತ್ತೂರಿನಿಂದ ಬೃಹತ್ ರೋಡ್ ಶೋ ನಡೆಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಅವರು ಸಾಗುತ್ತಿದ್ದ ವಾಹನದ ಹಿಂದೆಮುಂದೆ ಓಡಿದರು. ಅವರು ತೆರೆದ ಕಾರಿನ ಮೇಲೆ ಕುಳಿತುಕೊಂಡು ರಸ್ತೆಯ ಎರಡೂ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರತ್ತ ಕೈ ಬೀಸುತ್ತಾ ಸಾಗಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರ ಭಾವಚಿತ್ರವಿರುವ ಫಲಕಗಳನ್ನು ಹಿಡಿದುಕೊಂಡು ಘೋಷಣೆ ಕೂಗಿದರು.

ವಯನಾಡಿನಿಂದ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆಯಲ್ಲಿರುವ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಎರಡನೇ ಬಾರಿಗೆ ಕ್ಷೇತ್ರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ನಾಯಕ ಈ ತಿಂಗಳ ಆರಂಭದಲ್ಲಿ ವಯನಾಡಿನಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿ, ಬೃಹತ್ ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಅವರು ವಯನಾಡ್‌ನಿಂದ 4,31,770 ಮತಗಳ ದಾಖಲೆಯ ಅಂತರದಿಂದ ಗೆದ್ದಿದ್ದರು. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ

 

Previous Post
ಸಾರ್ವಜನಿಕ ಕ್ಷಮೆಯಾಚನೆಗೆ ಸಿದ್ದ ಸುಪ್ರೀಂಕೋರ್ಟ್‌ನಲ್ಲಿ ಬಾಬಾ ರಾಮ್‌ದೇವ್, ಬಾಲಕೃಷ್ಣ ಹೇಳಿಕೆ
Next Post
ಇಂದು ಬಾಲ ರಾಮನ ಹಣೆಗೆ ಸೂರ್ಯರಶ್ಮಿ ತಿಲಕ ರಾಮನವಮಿ ಹಿನ್ನಲೆ ಅಯೋಧ್ಯೆಯಲ್ಲಿ ಭಾರಿ ಜನ ಸಂದಣಿ

Recent News