ಅಣಕು ಮತದಾನದ ವೇಳೆ ಬಿಜೆಪಿಗೆ ಅಧಿಕ ಮತ ಆರೋಪ ನಿರಾಕರಿಸಿದ ಆಯೋಗ | ವಿವಿಪ್ಯಾಟ್ ಮತ ಎಣಿಕೆ ಆದೇಶ ಕಾಯ್ದಿರಿಸಿದ ಸುಪ್ರೀಂ

ಅಣಕು ಮತದಾನದ ವೇಳೆ ಬಿಜೆಪಿಗೆ ಅಧಿಕ ಮತ ಆರೋಪ ನಿರಾಕರಿಸಿದ ಆಯೋಗ | ವಿವಿಪ್ಯಾಟ್ ಮತ ಎಣಿಕೆ ಆದೇಶ ಕಾಯ್ದಿರಿಸಿದ ಸುಪ್ರೀಂ

ನವದೆಹಲಿ : ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗಧಿತ ಮತಕ್ಕಿಂತ ಹೆಚ್ಚುವರಿ ಮತ ಭಾರತೀಯ ಜನತಾ ಪಕ್ಷದ ಬಂದ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಪ್ರಕರಣದ ಬಗ್ಗೆ ಪರಿಶೀಲಿಸಿ, ಸ್ಥಳಿಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಆಯೋಗ ಈ ಆರೋಪ ಸುಳ್ಳು ಎಂದು ಸುಪ್ರೀಂಕೋರ್ಟ್ ಮುಂದೆ ಸ್ಪಷ್ಟಪಡಿಸಿದೆ.

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನ ನಡೆದ ವೇಳೆ 4 ಇವಿಎಂಗಳು ಮತ್ತು ವಿವಿಪ್ಯಾಟ್‌ಗಳ ಹೋಲಿಕೆಯಲ್ಲಿ ಬಿಜೆಪಿಗೆ ಒಂದು ಹೆಚ್ಚುವರಿ ಮತ ಬಂದಿದೆ. ಮಾಧ್ಯಮಗಳ ವರದಿ ಆಧರಿಸಿ ವಕೀಲ ಪ್ರಶಾಂತ್ ಭೂಷಣ್ ಅವರು ನ್ಯಾ. ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠದ ಮುಂದೆ ಪ್ರಸ್ತಾಪಿಸಿದರು. ಮನವಿ ಆಲಿಸಿದ ಪೀಠ ಚುನಾವಣಾ ಆಯೋಗದ ಸಲಹೆಗಾರ ಮಣಿಂದರ್ ಸಿಂಗ್ ಅವರಿಗೆ ಕ್ರಾಸ್ ಚೆಕ್ ಮಾಡಿ ಎಂದು ಕೋರ್ಟ್ ಹೇಳಿತು.

ಮಾಹಿತಿ ಪರಿಶೀಲಿನೆ ಬಳಿಕ ಸುಪ್ರೀಂಕೋರ್ಟ್ ಮುಂದೆ ಬಂದ ಆಯೋಗ ಇವಿಎಂ ಮತ್ತು ವಿವಿಪ್ಯಾಟ್ ಗಳ ಮೇಲೆ ಮಾಡಿರುವ ಆರೋಪ ಸುಳ್ಳು, ಮಾಧ್ಯಮಗಳಯ ತಪ್ಪಾದ ವರದಿ ಮಾಡಿವೆ. ಈ ಬಗ್ಗೆ ನಾವು ಪೂರ್ಣ ಮಾಹಿತಿ ಸಲ್ಲಿಸಲು ಸಿದ್ಧವಿದ್ದೇವೆ ಎಂದು ಹೇಳಿತು.

ಇದಾದ ಬಳಿಕ ಇವಿಎಂಗಳ ಮೂಲಕ ಚಲಾವಣೆಯಾದ ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವೋಟರ್-ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಸ್ಲಿಪ್‌ಗಳೊಂದಿಗೆ ತಾಳೆ ಮಾಡಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಬ್ಯಾಚ್ ಅನ್ನು ನ್ಯಾಯಾಲಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತು.

ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರವಾಲ್, ಪ್ರತಿಯೊಂದು ಇವಿಎಂ ಮತವನ್ನು ವಿವಿಪ್ಯಾಟ್ ಸ್ಲಿಪ್‌ಗಳಿಗೆ ಹೋಲಿಸಬೇಕು ಎಂದು ಪ್ರಾರ್ಥಿಸಿದ್ದರು. ಪ್ರಸ್ತುತ, ಪ್ರತಿ ವಿಧಾನಸಭೆ ಚುನಾವಣೆಯಲ್ಲಿ ಯಾದೃಚ್ಛಿಕವಾಗಿ ಆಯ್ಕೆ ಮಾಡಿದ ಐದು ಇವಿಎಂಗಳಲ್ಲಿ ದಾಖಲಾದ ಮತಗಳಿಗೆ ಮಾತ್ರ ವಿವಿಪ್ಯಾಟ್ ಪರಿಶೀಲನೆಯನ್ನು ಮಾಡಲಾಗುತ್ತದೆ.

Previous Post
6600 ಕೋಟಿ ಮೌಲ್ಯದ ಬಿಟ್‌ಕಾಯಿನ್ ಹಗರಣ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ 98 ಕೋಟಿ ಆಸ್ತಿ ಜಫ್ತಿ
Next Post
ಶಿವಶಂಕರ ರೆಡ್ಡಿ ಮತ್ತು ಪುಟ್ಟಸ್ವಾಮಿ ಗೌಡರು ಒಟ್ಟಾಗಿ ರಕ್ಷಾ ರಾಮಯ್ಯರಿಗೆ 50 ಸಾವಿರ ಲೀಡ್ ಗೌರಬಿದನೂರಿನಲ್ಲಿ ಕೊಡಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ

Recent News