ಮೀಸಲಾತಿ ಅಗತ್ಯವಿರುವವರೆಗೂ ವಿಸ್ತರಿಸಬೇಕು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

ಮೀಸಲಾತಿ ಅಗತ್ಯವಿರುವವರೆಗೂ ವಿಸ್ತರಿಸಬೇಕು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

ಹೈದರಾಬಾದ್: ಸಂಘ ಪರಿವಾರವು ಎಂದಿಗೂ ಮೀಸಲಾತಿಯನ್ನು ವಿರೋಧಿಸಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಶಿಕ್ಷಣ ಸಂಸ್ಥೆಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ಎಲ್ಲಿಯವರೆಗೂ ಅಗತ್ಯವಿದೆಯೋ ಅಲ್ಲಿಯವರೆಗೆ ವಿಸ್ತರಿಸಬೇಕು ಎಂಬುದು ಸಂಘದ ಅಭಿಪ್ರಾಯವಾಗಿದೆ ಎಂದಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗವತ್ ತಮ್ಮ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಅಗೋಚರವಾಗಿದ್ದರೂ ತಾರತಮ್ಯವಿದೆ ಎಂದಿದ್ದಾರೆ. ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ಕಳೆದ ವರ್ಷ ನಾಗ್ಪುರದಲ್ಲಿ ಹೇಳಿದ್ದರು. ಆ ಹೇಳಿಕೆಯನ್ನು ಈಗ ಪುನರುಚ್ಛರಿಸಿದ್ದಾರೆ.

ಆರ್‌ಎಸ್‌ಎಸ್‌ ಮೀಸಲಾತಿ ವಿರುದ್ಧ ಎಂಬ ವಿಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ಹೊರಗಡೆ ಮಾತನಾಡುವಂತಿಲ್ಲ. ಈಗ ಇದು ಸಂಪೂರ್ಣ ಸುಳ್ಳು; ಸಂವಿಧಾನದ ಪ್ರಕಾರವೇ ಎಲ್ಲ ಮೀಸಲಾತಿಗಳನ್ನು ಸಂಘವು ಮೊದಲಿನಿಂದಲೂ ಬೆಂಬಲಿಸುತ್ತಾ ಬಂದಿದೆ. ಮೊದಲಿನಿಂದಲೂ ಸುಳ್ಳು ವಿಡಿಯೋಗಳನ್ನು ಹರಿಬಿಡುತ್ತಿದ್ದಾರೆ ಎಂದರು.

Previous Post
ಆಪ್ ಚುನಾವಣಾ ಪ್ರಚಾರ ಗೀತೆ ನಿಷೇಧಿಸಿದ ಆಯೋಗ
Next Post
ಆಪ್ ಜೊತೆಗೆ ಮೈತ್ರಿ ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ‌ ನೀಡಿದ ಅರವಿಂದರ್‌ ಸಿಂಗ್‌ ಲವ್ಲಿ

Recent News