ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು

ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತುಗೊಳಿಸಿದೆ.ಮಂಗಳವಾರನಡೆದ ಜೆಡಿಎಸ್‌ ಪಕ್ಷದ ಕೋರ್‌ ಕಮಿಟಿಪ್ರಜ್ವಲ್‌ ಸಭೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರು ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.ಪಕ್ಷದ ನಿರ್ಧಾರದಂತೆ ಅವರನ್ನು ನಮ್ಮ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ಶಿಫಾರಸು ಮಾಡಲಾಗಿದೆ.ಒಂದು ವೇಳೆ ಎಸ್‌ ಐಟಿ ತನಿಖೆಯಲ್ಲಿ ಆರೋಪ ಸಾಬೀತಾದ್ರೆ ಅವರನ್ನು ಶಾಶ್ವತವಾಗಿ ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ಸಭೆ ಬಳಿಕ ಹೆಚ್ ಡಿಕೆ ಹೇಳಿದ್ದಾರೆ.ಇದಲ್ಲದೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸಲ್ಲ ಎಂದು ಪರೋಕ್ಷವಾಗಿ ರೇವಣ್ಣ ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದರು.

Previous Post
ಬಿಸಿಲು ತಪ್ಪಿಸಲು ‘ಕಪ್ಪು ಛತ್ರಿ’ ಬಳಿಸಿ
Next Post
ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

Recent News