ಭೂಕುಸಿತ: 2 ಸಾವಿರಕ್ಕೂ ಹೆಚ್ಚು ಮಂದಿ ಸಾವು; ಭಾರತದಿಂದ 1 ಮಿಲಿಯನ್ ಡಾಲರ್ ನೆರವು

ಭೂಕುಸಿತ: 2 ಸಾವಿರಕ್ಕೂ ಹೆಚ್ಚು ಮಂದಿ ಸಾವು; ಭಾರತದಿಂದ 1 ಮಿಲಿಯನ್ ಡಾಲರ್ ನೆರವು

ನವದೆಹಲಿ: ಪಪುವಾ ನ್ಯೂಗಿನಿಯಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕುಸಿತದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರದ ವೇದಿಕೆ (ಎಫ್‌ಐಪಿಐಸಿ) ಅಡಿಯಲ್ಲಿ ನಿಕಟ ಸ್ನೇಹಿತ ಮತ್ತು ಪಾಲುದಾರ ರಾಷ್ಟ್ರವಾಗಿ ಭಾರತ ಪಪುವಾ ನ್ಯೂಗಿನಿಯಾದ ಜನರೊಂದಿಗೆ ಒಗ್ಗಟ್ಟಿನ ಸೂಚಕವಾಗಿ ತತ್ ಕ್ಷಣದ ಪರಿಹಾರವಾಗಿ 1 ಮಿಲಿಯನ್ ಡಾಲರ್ ಹಣವನ್ನು ನೀಡುವುದಾಗಿ ಘೋಷಣೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಉಂಟಾದ ಜೀವಹಾನಿ ಮತ್ತು ಆಸ್ತಿ ಹಾನಿಯಿಂದ ತೀವ್ರ ದುಃಖವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಭಾರತವು ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ಸಹಾಯವನ್ನು ನೀಡಲು ಸಿದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

2018 ರಲ್ಲಿ ಭೂಕಂಪ ಮತ್ತು 2019 ಮತ್ತು 2023 ರಲ್ಲಿ ಜ್ವಾಲಾಮುಖಿ ಸ್ಫೋಟಗಳಂತಹ ನೈಸರ್ಗಿಕ ವಿಕೋಪಗಳಿಂದ ಉಂಟಾದ ಕಷ್ಟ ಮತ್ತು ವಿನಾಶದ ಸಮಯದಲ್ಲಿ ಭಾರತವು ಪಪುವಾ ನ್ಯೂಗಿನಿಯಾದ ಪರವಾಗಿ ದೃಢವಾಗಿ ನಿಂತು ನೆರವು ನೀಡಿತ್ತು.

Previous Post
ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣ :ಆರೋಪಿಗಳಾದ ನವೀನ ಗೌಡ, ಚೇತನನ್ನು ಬಂಧಿಸಿದ ‘SIT’
Next Post
ಉದ್ಯೋಗಾಕಾಂಕ್ಷಿಗಳ ಬದಲಿಗೆ ಉದ್ಯೋಗದಾತಗಾಗಿ- ಉಪರಾಷ್ಟ್ರಪತಿ ಕರೆ

Recent News