ಗೆಲುವಿನ ವಿಶ್ವಾಸದಲ್ಲಿರುವ ಎನ್‌ಡಿಎ ಜೂನ್ 9 ರಂದು ಪ್ರಮಾಣವಚನ ಕಾರ್ಯಕ್ರಮಕ್ಕೆ ತಯಾರಿ

ಗೆಲುವಿನ ವಿಶ್ವಾಸದಲ್ಲಿರುವ ಎನ್ಡಿಎ ಜೂನ್ 9 ರಂದು ಪ್ರಮಾಣವಚನ ಕಾರ್ಯಕ್ರಮಕ್ಕೆ ತಯಾರಿ

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ದತೆ ಆರಂಭಿಸಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದ್ದು ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಬಾರಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ.

2014 ರಲ್ಲಿ ಮೇ 16 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು ಮೇ 26 ರಂದು ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. 2019 ರಲ್ಲಿ ಮೇ 23 ರಂದು ಫಲಿತಾಂಶ ಪ್ರಕಟವಾಗಿತ್ತು ಮೇ 30 ರಂದು ಅವರು ಎರಡನೇ ಬಾರಿ ಸರ್ಕಾರದ ಚುಕ್ಕಾಣಿ ಹಿಡಿದಿದ್ದರು. ಎರಡು ಬಾರಿಯೂ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆದಿತ್ತು, ಎರಡನೇ ಬಾರಿಗೆ ನಡೆದ ಕಾರ್ಯಕ್ರಮದಲ್ಲಿ 9000 ಅತಿಥಿಗಳು ಭಾಗಿಯಾಗಿದ್ದರು.

ಈಗ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಅವಕಾಶ ಒದಗಿ ಬಂದಿದ್ದು ಈ ಹಿನ್ನಲೆ ವಿಶೇಷವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಚಿಂತನೆ ನಡೆದಿದ್ದು ರಾಷ್ಟ್ರಪತಿ ಭವನದ ಬದಲು ಕರ್ತವ್ಯಪಥದಲ್ಲಿ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದೆ. ಆದರೆ ದೆಹಲಿಯಲ್ಲಿ ತೀವ್ರ ಬಿಸಿಲಿದ್ದು ತಾಪಮಾನ 55° ಡಿಗ್ರಿ ಆಸುಪಾಸಿನಲ್ಲಿದೆ ಈ ಹಿನ್ನಲೆ ಇನ್ನು ಇದು ಅಂತಿಮವಾಗಿಲ್ಲ. ಜೂನ್ 13 ಮತ್ತು 14 ರಂದು ಇಟಲಿಯಲ್ಲಿ ನಡೆಯಲಿರುವ ಜಿ7 ಸಭೆಯಲ್ಲಿ ಭಾಗವಹಿಸಲು ಮೋದಿ ಈಗಾಗಲೇ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದು ಫಲಿತಾಂಶ ಪೂಕರವಾಗಿದ್ದರೆ ಸಾಧ್ಯವಾದಷ್ಟು ಬೇಗ ಹೊಸ ಸರ್ಕಾರ ಪ್ರಕ್ರಿಯೆಗಳನ್ನು ಮಾಡಿ ಮುಗಿಸಲಯ ನಿರ್ಧರಿಸಿದ್ದು ಫಲಿತಾಂಶದ ಬೆನ್ನಲೆ ಸ್ಥಳ ಅಂತಿಮವಾಗಲಿದ್ದ ಈ ನಡುವೆ ಬಾಕಿ ಎಲ್ಲ ತಯಾರಿಗಳು ಆರಂಭಗೊಂಡಿದೆ ಎಂದು ಮೂಲಗಳು ತಿಳಿಸಿವೆ.

Previous Post
ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Next Post
ಕೊನೆಗೂ ‘ಲುಫ್ತಾನ್ಸ’ ಫ್ಲೈಟ್ ಏರಿದ ಪ್ರಜ್ವಲ್ : ಮ್ಯೂನಿಕ್ ಏರ್ಪೋರ್ಟ್ ನಿಂದ ವಿಮಾನ ಟೇಕ್ ಆಫ್

Recent News