ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..! ಯೆಲ್ಲೋ ಅಲರ್ಟ್!

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..! ಯೆಲ್ಲೋ ಅಲರ್ಟ್!

ಬೆಂಗಳೂರು :- ಇಂದು ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಭಾರಿ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ,ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಮನಗರ, ದೇವರಹಿಪ್ಪರಗಿ, ಯಲಹಂಕ, ನಾರಾಯಣಪುರ, ಚಿತ್ತಾಪುರ, ತಾವರಗೇರಾ, ಚನ್ನಪಟ್ಟಣ, ಸೈದಾಪುರ, ಮುದ್ದೇಬಿಹಾಳ, ಹಗರಿಬೊಮ್ಮನಹಳ್ಳಿ, ಕೆಂಭಾವಿ, ಮೈಸೂರು, ಸಿರಾ, ಲಿಂಗಸುಗೂರು, ರಾಯಚೂರು, ಭಾಲ್ಕಿ, ಗಂಗಾವತಿ, ಶಿರಹಟ್ಟಿ, ಆಗುಂಬೆ, ಮಾನ್ವಿ, ಬಾಳೆಹೊನ್ನೂರು, ಮಂಡ್ಯ, ಹೆಸರಘಟ್ಟ, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.

Previous Post
ದೇಶದ 64.2 ಕೋಟಿ ಜನರಿಂದ ಈ ಸಲ ಮತದಾನ : ವಿಶ್ವದಾಖಲೆ
Next Post
ಆಂಧ್ರಪ್ರದೇಶದಲ್ಲಿ ಟಿಡಿಪಿ, ಒಡಿಶಾದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

Recent News