ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮಹತ್ವ ಸಭೆ ನಡೆಸಿತು.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮಹತ್ವ ಸಭೆ ನಡೆಸಿತು.

NEW DELHI, JUNE 5 (UNI):- Prime Minister Narendra Modi, TDP supremo N Chandrababu Naidu and Bihar Chief Minister Nitish Kumar at the NDA meeting in New Delhi on Wednesday.UNI PHOTO-82U

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮಹತ್ವ ಸಭೆ ನಡೆಸಿತು. ಈ ಸಭೆಯಲ್ಲಿ ಬಿಜೆಪಿ ಮಿತ್ರಪಕ್ಷಗಳ ನಾಯಕರು ಭಾಗಿಯಾಗಿದ್ದರು. ​ಹಿರಿಯ ನಾಯಕರ ಸಭೆ ರಾಷ್ಟ್ರ ರಾಜಧಾನಿಯಲ್ಲಿ ನಡೆಯಿತು.240 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, ತೆಲುಗು ದೇಶಂ ಪಕ್ಷ ಮತ್ತು ಜನತಾ ದಳ (ಯುನೈಟೆಡ್) ಸೇರಿದಂತೆ ಹಲವಾರು ಮಿತ್ರಪಕ್ಷಗಳ ಬೆಂಬಲದೊಂದಿಗೆ 272 ಬಹುಮತದ ಗಡಿ ದಾಟಿದೆ.

ಎನ್​ಡಿಎ ಸತತ 3ನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಮುಂದಾಗಿದ್ದು, ಈ ಬಾರಿ ಟಿಡಿಪಿಯ ಎನ್. ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್ ಕಿಂಗ್ ಮೇಕರ್​ಗಳಾಗಿದ್ದಾರೆ. ಬಿಜೆಪಿ ಸ್ವಂತ ಬಲದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲದ ಕಾರಣ, ನಾಯ್ಡು-ನಿತೀಶ್​ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಮೋದಿ ದಾಖಲೆಯ ಮೂರನೇ ಅವಧಿಗೆ ಸಿದ್ಧರಾಗಿದ್ದಾರೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ ಬಹುಮತದ 272 ಕ್ಕಿಂತ ಹೆಚ್ಚು ಇದೆ. 240 ಸ್ಥಾನಗಳನ್ನು ಗೆದ್ದ ಬಿಜೆಪಿ, 2014 ರಿಂದ ಮೊದಲ ಬಾರಿಗೆ ಮ್ಯಾಜಿಕ್ ಸಂಖ್ಯೆಗಿಂತ ಕಡಿಮೆ ಸೀಟುಗಳನ್ನು ಗೆದ್ದಿದೆ. ಹಾಗಾಗಿ ಮಿತ್ರಪಕ್ಷಗಳ ಮೇಲೆ ಅವಲಂಬನೆ ಅನಿವಾರ್ಯವಾಗಿದೆ.ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸಭೆಯಲ್ಲಿ ಭಾಗಿಯಾಗಿದ್ದರು. ಮೋದಿ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಭೆಗೆ ಗೈರಾಗಿದ್ದಾರೆ.ಟಿಡಿಪಿ, ಜೆಡಿಯು, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಕ್ರಮವಾಗಿ 16, 12, 7 ಮತ್ತು 5 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ನಾಯಕ ಜಿತನ್ ರಾಮ್ ಮಾಂಝಿ ಕೂಡ NDA ಸಭೆಯಲ್ಲಿ ಹೆಚ್ಚಿನದ್ದನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

Previous Post
17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು; ಪ್ರಧಾನ ಮಂತ್ರಿ’ ಸ್ಥಾನಕ್ಕೆ ‘ನರೇಂದ್ರ ಮೋದಿ’ ರಾಜೀನಾಮೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ
Next Post
ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ

Recent News