9 ರಂದು ಸಂಜೆ 6 ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ..! ವಿಶ್ವ ನಾಯಕರು ಭಾಗಿ ಸಾಧ್ಯತೆ

9 ರಂದು ಸಂಜೆ 6 ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ..! ವಿಶ್ವ ನಾಯಕರು ಭಾಗಿ ಸಾಧ್ಯತೆ

ನವದೆಹಲಿ: ಜೂನ್ 9ರ ಭಾನುವಾರ ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಮೊದಲು ಇದನ್ನು ಜೂನ್ 8 ಕ್ಕೆ ನಿಗದಿಪಡಿಸಲಾಗಿತ್ತು, ಆದಾಗ್ಯೂ, ಅಂತಿಮ ದಿನಾಂಕದ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಖಾಸಗಿ ಮಾಧ್ಯಮಗಳು ವರದಿ ಮಾಡಿದೆ.ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ 293 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಿ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಪದಗ್ರಹಣ ಸಮಾರಂಭಕ್ಕೆ ನೆರೆ ರಾಷ್ಟ್ರಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್, ನೇಪಾಳ ಮತ್ತು ಮಾರಿಷಸ್‌ ದೇಶದ ಪ್ರಮುಖ ನಾಯಕರು ಆಗಮಿಸುವ ನಿರೀಕ್ಷೆ ಇದೆ.ಚುನಾವಣೆ ಗೆಲುವಿನ ಬಳಿಕ ಮೋದಿ ಅವರಿಗೆ ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಇತರ ದೇಶಗಳ ರಾಷ್ಟ್ರಗಳ ಮುಖ್ಯಸ್ಥರ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ದಿನಾಂಕ ಮತ್ತು ಸಮಯವನ್ನು ಇನ್ನೂ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ, ಮೋದಿ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಅಲ್ಲಿನ ಅಧ್ಯಕ್ಷರನ್ನು ಆಹ್ವಾನಿಸಿದ್ದಾರೆ ಎಂದು ವಿಕ್ರಮಸಿಂಘೆ ಕಚೇರಿಯ ಮಾಧ್ಯಮ ವಿಭಾಗ ತಿಳಿಸಿದೆ.ಮತ್ತೊಂದೆಡೆ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೂ ಮೋದಿ ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಇನ್ನುಳಿದಂತೆ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.2014ರಲ್ಲಿ ಮೊದಲ ಬಾರಿ ಪ್ರಧಾನಿಯಾಗಿ ಮೋದಿ ತಮ್ಮ ಪ್ರಮಾಣ ವಚನ ಸಮಾರಂಭದಲ್ಲಿ ಸಾರ್ಕ್ (ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ) ದೇಶಗಳ ನಾಯಕರು ಭಾಗವಹಿಸಿದ್ದರು. 2019ರಲ್ಲಿ ಸತತ ಎರಡನೇ ಅವಧಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡಿದಾಗ ಬಂಗಾಳ ಕೊಲ್ಲಿಯನ್ನು ಅವಲಂಬಿಸಿದ ಬಾಂಗ್ಲಾದೇಶ, ಭೂತಾನ್, ಭಾರತ, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥೈಲ್ಯಾಂಡ್) ರಾಷ್ಟ್ರಗಳ ನಾಯಕರು ಆಗಮಿಸಿದ್ದರು.  ಭಾನುವಾರ ಸಂಜೆಯೊಳಗೆ ಹಲವಾರು ಗಣ್ಯರು ಹೊರಡಬೇಕಾಗಿ ಬಂದರೆ, ಭಾನುವಾರ ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭವನ್ನು ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

Previous Post
ಚುನಾವಣಾ ಫಲಿತಾಂಶದಿಂದ ಮೋದಿಗೆ ದೊಡ್ಡ ರಾಜಕೀಯ ನಷ್ಟವಾಗಿದೆ ಎನ್‌ಡಿಎ ಒಕ್ಕೂಟದ ನಾಯಕರ ಸಭೆಯಲ್ಲಿ ಖರ್ಗೆ ಅಭಿಪ್ರಾಯ
Next Post
ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ನಾಗೇಂದ್ರ ರಾಜೀನಾಮೆ

Recent News