ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ದೆಹಲಿ ಸರ್ಕಾರಕ್ಕೆ ಚಾಟೀ ಬೀಸಿದ ಸುಪ್ರೀಂಕೋರ್ಟ್

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ದೆಹಲಿ ಸರ್ಕಾರಕ್ಕೆ ಚಾಟೀ ಬೀಸಿದ ಸುಪ್ರೀಂಕೋರ್ಟ್

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀರಿನ ತೀವ್ರ ಸಮಸ್ಯೆ ನಡುವೆ ಟ್ಯಾಂಕರ್ ಮಾಫಿಯ ಹೆಚ್ಚಳವಾಗಿದ್ದು ಇದರ ವಿರುದ್ಧ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಈ ನಡುವೆ ನೀರಿ ವ್ಯರ್ಥ ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ನೀಡುವಂತೆ ಕೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಪ್ರಸನ್ನ ಬಿ ವರಾಳೆ ಅವರ ರಜಾಕಾಲದ ಪೀಠವು, ಟ್ಯಾಂಕರ್ ಮಾಫಿಯಾವನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ, ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಸೂಚಿಸುತ್ತೇವೆ ಎಂದು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ ದೆಹಲಿ ಸರ್ಕಾರ ವಿರುದ್ಧ ಚಾಟೀ ಬಿಸಿದ ಕೋರ್ಟ್, ನ್ಯಾಯಾಲಯದ ಮುಂದೆ ಏಕೆ ಸುಳ್ಳು ಹೇಳಿಕೆಗಳನ್ನು ನೀಡಿದ್ದೀರಿ, ಹಿಮಾಚಲ ಪ್ರದೇಶದಿಂದ ನೀರು ಬರುತ್ತಿದೆ ಹಾಗಾದರೆ ದೆಹಲಿಯಲ್ಲಿ ನೀರು ಎಲ್ಲಿಗೆ ಹೋಗುತ್ತಿದೆ? ಇಷ್ಟೊಂದು ನೀರು ಪೋಲು ಆಗುತ್ತಿದೆ, ಟ್ಯಾಂಕರ್ ಮಾಫಿಯಾಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿತು.

ಜನರು ಏನು ತೊಂದರೆ ಅನುಭವಿಸುತ್ತಿದ್ದಾರೆ ನಾವು ಎಲ್ಲಾ ಸುದ್ದಿ ವಾಹಿನಿಗಳಲ್ಲಿ ದೃಶ್ಯಗಳನ್ನು ನೋಡುತ್ತಿದ್ದೇವೆ. ಬೇಸಿಗೆಯಲ್ಲಿ ನೀರಿನ ಕೊರತೆಯು ಪುನರಾವರ್ತಿತ ಸಮಸ್ಯೆಯಾಗಿದ್ದರೆ ನೀರಿನ ವ್ಯರ್ಥವನ್ನು ನಿಯಂತ್ರಿಸಲು ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ. ನೀರಿನ ನಷ್ಟಕ್ಕೆ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೇಳಿದೆ. ಈ ಸಂಬಂಧ ಗುರುವಾರ ವಿಚಾರಣೆ ನಡೆಯಲಿದೆ ಎಂದು ಪೀಠ ಹೇಳಿದೆ.

Previous Post
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್
Next Post
ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆಗೊಳಿಸಿದ ಜಮ್ಮು ಕಾಶ್ಮೀರದ ಪೊಲೀಸರು

Recent News