ತಮಿಳಿಸೈ ಜತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ ಕಿಡಿ

ತಮಿಳಿಸೈ ಜತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ ಕಿಡಿ

ಚೆನ್ನೈ, ಜೂ. 13: ಬಿಜೆಪಿ ನಾಯಕಿ ಹಾಗೂ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿಂದಿಸಿರುವ ರೀತಿಯಲ್ಲಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾದ ವಿವಾದ ಮತ್ತು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಇದರ ಬೆನ್ನಲ್ಲಿ ಪ್ರತಿಕ್ರಿಯಿಸಿದ ಮಾರನ್ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ.
ಗೃಹ ಸಚಿವ ಅಮಿತ್‌ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಥವಾ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಜೊತೆ ಅದೇ ರೀತಿಯಾಗಿ ವರ್ತಿಸುತ್ತಾರೆಯೇ? ಅವರು ತಮಿಳುನಾಡಿನವರು ಎಂಬ ಕಾರಣಕ್ಕೆ ಆಕೆಯನ್ನು ಯಾವುದೇ ರೀತಿಯಲ್ಲಿ ನಡೆಸಿಕೊಳ್ಳಬಹುದೇ? ಇದು ಅತ್ಯಂತ ಅನಪೇಕ್ಷಿತವಾಗಿದೆ ಎಂದು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಹೇಳಿದ್ದಾರೆ.
ಈ ಕುರಿತು ವೈರಲ್‌ ಆಗಿರುವ ವಿಡಿಯೋದಲ್ಲಿ ತಮಿಳಿಸೈ ಅಮಿತ್ ಶಾ ಅವರನ್ನು ಅಭಿನಂದಿಸುತ್ತಿರುವುದನ್ನು ಕಾಣಬಹುದು. ಆ ಬಳಿಕ ಅಮಿತ್‌ ಶಾ ತಮಿಳಿಸೈ ಅವರನ್ನು ಮರಳಿ ಕರೆದು ಗಂಭೀರ ಚರ್ಚೆಯಲ್ಲಿ ತೊಡಗಿದ್ದಾರೆ. ತಮಿಳಿಸೈಗೆ ಅಮಿತ್‌ ಶಾಗೆ ಕೈ ಸನ್ನೆಯಲ್ಲಿ ವಾರ್ನ್‌ ಮಾಡುವುದು ಸೆರೆಯಾಗಿದೆ. ಈ ಕುರಿತ ಪೋಟೋ ವೈರಲ್‌ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದ ಬಳಕೆದಾರರು ಸಂಭಾಷಣೆಯ ಸ್ವರೂಪದ ಬಗ್ಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ತಮಿಳಿಸೈ ಮತ್ತು ಅಣ್ಣಾಮಲೈ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ.
ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳಿಸೈ ಅವರು ತಮಿಳುನಾಡು ಬಿಜೆಪಿ ಘಟಕದ ವಿರುದ್ಧ ಟೀಕೆ ಮಾಡಿದ್ದರು. ಅಪರಾಧ ಹಿನ್ನೆಲೆಯ ಜನ ಪಕ್ಷದಲ್ಲಿ ಸೇರಿದ್ದಾರೆ ಎಂದು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರು. ಅದರ ಬಗ್ಗೆ ಕೋಪಗೊಂಡಿದ್ದ ಅಮಿತ್ ಶಾ, ಪಕ್ಷದ ವಿಚಾರಗಳ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡಬಾರದು ಎಂದು ವಾರ್ನ್‌ ಮಾಡಿದ್ದಾರೆ ಎನ್ನಲಾಗಿದೆ.

Previous Post
ಕಾಶ್ಮೀರದಲ್ಲಿ ಪರಿಸ್ಥಿತಿ ಪರಿಶೀಲಿಸಲು ಮೋದಿ ಸೂಚನೆ
Next Post
ಅಜಿತ್‌ ಬಣ ಟೀಕಿಸಿದ ಆರೆಸ್ಸೆಸ್‌: ಹಳಸಿದ ಅಜಿತ್-ಎನ್‌ಡಿಎ ಸಂಬಂಧ

Recent News