ಜಿ7 ಶೃಂಗಸಭೆ: ಝೆಲೆನ್ಸ್ಕಿ, ಮ್ಯಾಕ್ರನ್, ರಿಷಿ ಸುನಕ್ ಭೇಟಿಯಾದ ಪ್ರಧಾನಿ ಮೋದಿ

ಜಿ7 ಶೃಂಗಸಭೆ: ಝೆಲೆನ್ಸ್ಕಿ, ಮ್ಯಾಕ್ರನ್, ರಿಷಿ ಸುನಕ್ ಭೇಟಿಯಾದ ಪ್ರಧಾನಿ ಮೋದಿ

ರಿ: ಇಟಲಿಯ ಅಪುಲಿಯಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು.

ರಷ್ಯಾ-ಉಕ್ರೇನ್ ಸಂಘರ್ಷದ ವಿವಿಧ ಅಂಶಗಳನ್ನು ಝೆಲೆನ್ಸ್ಕಿ, ಮೋದಿಯವರಿಗೆ ವಿವರಿಸಿದರು ಎಂದು ತಿಳಿದುಬಂದಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಹಿರೋಷಿಮಾದಲ್ಲಿ ನಡೆದ ಹಿಂದಿನ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಅವರು ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿದ್ದರು. ಉಕ್ರೇನ್‌ನಲ್ಲಿನ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂದು ಭಾರತ ಪ್ರತಿಪಾದಿಸುತ್ತಿದೆ.

ಜಿ7 ಶೃಂಗಸಭೆಯಲ್ಲಿ ಸಿರಿಧಾನ್ಯ ಬಿರಿಯಾನಿ, ಖಾಂಡ್ವಿ ಊಟ ಆಯೋಜಿಸಿದ ಪ್ರಧಾನಿ ಮೋದಿ

ಬಳಿಕ ಪ್ರಧಾನಿ ಮೋದಿ ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನುಭೇಟಿಯಾದರು.ಈ ವೇಳೆ ಉಭಯ ರಾಷ್ಟ್ರಗಳ ನಾಯಕರು ಭಾರತ ಮತ್ತು ಯುಕೆ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಶೇಷವಾಗಿ ಎನ್‌ಡಿಎ ಸರ್ಕಾರದ ಮೂರನೇ ಅವಧಿಯಲ್ಲಿ ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಸೆಮಿಕಂಡಕ್ಟರ್‌, ತಂತ್ರಜ್ಞಾನ ಮತ್ತು ವ್ಯಾಪಾರದಂತಹ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಕುರಿತಂತೆ ಚರ್ಚೆ ನಡೆಸಲಾಯಿತು. ಪರಸ್ಪರ ಕಾರ್ಯತಂತ್ರದ ಹಿತಾಸಕ್ತಿಗಳನ್ನು ಒತ್ತಿಹೇಳುವ ಮೂಲಕ ರಕ್ಷಣಾ ವಲಯದಲ್ಲಿ ಸಹಯೋಗವನ್ನು ಮತ್ತಷ್ಟು ಗಟ್ಟಿಗೊಳಿಸುವ ಅವಕಾಶಗಳ ಕುರಿತು ಮಾತುಕತೆ ನಡೆಸಿದರು. ಕಳೆದ ಸೆಪ್ಟೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಸುನಕ್ ಮತ್ತು ಮೋದಿ ಕೊನೆಯದಾಗಿ ಭೇಟಿಯಾಗಿದ್ದರು.

ಜಿ7 ರಾಷ್ಟ್ರ ನಾಯಕರಿಗೆ ಪ್ರಧಾನಿ ಮೋದಿಯಿಂದ ಅಪರೂಪದ ಉಡುಗೊರೆ

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದ ಮೋದಿ, ರಕ್ಷಣೆ, ಪರಮಾಣು ಮತ್ತು ಬಾಹ್ಯಾಕಾಶ ಕ್ಷೇತ್ರಗಳು ಸೇರಿದಂತೆ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಅಲ್ಲದೇ, ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ. ಜನವರಿಯಲ್ಲಿ ಭಾರತದ 75 ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದಾಗ ಉಭಯ ನಾಯಕರು ಕೊನೆಯದಾಗಿ ಭೇಟಿಯಾಗಿದ್ದರು.

Previous Post
ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ ಡಿ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ..!
Next Post
ಭಾರತ-ಮಧ್ಯಪ್ರಾಚ್ಯ-ಯುರೋಪ್‌ ಆರ್ಥಿಕ ಕಾರಿಡಾರ್‌ ಸಹಕಾರಕ್ಕೆ ಒಪ್ಪಿಗೆ

Recent News