ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ನೂತನ ಸಂಸದರ ಪ್ರಮಾಣವಚನ ಸ್ವೀಕಾರ | ಸ್ಪೀಕರ್ ಚುನಾವಣೆ ಕುತೂಹಲ

ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ನೂತನ ಸಂಸದರ ಪ್ರಮಾಣವಚನ ಸ್ವೀಕಾರ | ಸ್ಪೀಕರ್ ಚುನಾವಣೆ ಕುತೂಹಲ

ನವದೆಹಲಿ : 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತರಾದ ಎಲ್ಲ ಸಂಸದರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ನಂತರ ಸ್ಪೀಕರ್ ಆಯ್ಕೆ ನಡೆಯಲಿದ್ದು ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ ಸದನ ಆರಂಭವಾಗಲಿದ್ದು ಪ್ರಧಾನಿ ಮೋದಿ ಮತ್ತು ಅವರ ಮಂತ್ರಿಮಂಡಲ ಮೊದಲು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ವಿವಿಧ ರಾಜ್ಯಗಳ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದು, ನಾಳೆ (ಜೂನ್ 25) 264 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಬಳಿಕ ಮಹತಾಬ್ ಸಂಸತ್ತನ್ನು ತಲುಪುತ್ತಾರೆ ಮತ್ತು ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಅಧಿವೇಶನ ಅರಂಭಿಸಲಿದ್ದಾರೆ. ಮೊದಲು ಇತ್ತಿಚೇಗೆ ಮೃತರಾದ ಗಣ್ಯರಿಗೆ ಮೌನ ಆಚರಿಸಲಾಗುವುದು ಎಂದು ತಿಳಿದು ಬಂದಿದೆ.

ಜೂನ್ 26 ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದ್ದು ಅಭ್ಯರ್ಥಿ ಯಾರು ಎನ್ನುವುದು ಇನ್ನು ಬಹಿರಂಗ ಪಡಿಸಿಲ್ಲ, ಬಿಜೆಪಿ ತನ್ನ ಸಂಸದರನ್ನೇ ಸ್ಪೀಕರ್ ಅನ್ನಾಗಿ ಮಾಡಬೇಕು ಎನ್ನುವ ಲೆಕ್ಕಚಾರದಲ್ಲಿದೆ. ಇದಕ್ಕೆ ಆರಂಭದಲ್ಲಿ ಸ್ಪೀಕರ್ ಹುದ್ದೆಯ ನಿರೀಕ್ಷೆಯಲ್ಲಿದ್ದ ಟಿಡಿಪಿ ಸೇರಿ ಬಹುತೇಕ ಎನ್‌ಡಿಎ ಪಕ್ಷಗಳು ಬೆಂಬಲ ಸೂಚಿಸಿವೆ ಎನ್ನಲಾಗಿದೆ. ಉಪ ಸಭಾಪತಿ ಸ್ಥಾನಕ್ಕಾಗಿ ವಿಪಕ್ಷಗಳು ಪ್ರಯತ್ನ ನಡೆಸಿವೆ‌.

ಜೂನ್ 27 ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಮೇಲಿನ ಚರ್ಚೆ ಜೂನ್ 28 ರಂದು ಪ್ರಾರಂಭವಾಗುತ್ತದೆ. ಜುಲೈ 2 ಅಥವಾ 3 ರಂದು ಪ್ರಧಾನಿ ಮೋದಿ ಚರ್ಚೆಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ. ಬಳಿಕ ಎರಡೂ ಸದನಗಳು ಸಂಕ್ಷಿಪ್ತ ವಿರಾಮಕ್ಕೆ ಹೋಗುತ್ತವೆ ಮತ್ತು ಕೇಂದ್ರ ಬಜೆಟ್ ಮಂಡನೆಗಾಗಿ ಜುಲೈ 22 ರಂದು ಮರು-ಸಂಯೋಜನೆಗೊಳ್ಳುವ ನಿರೀಕ್ಷೆಯಿದೆ.

Previous Post
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ವಜಾ
Next Post
ಲೋಕಸಭೆ ಚುನಾವಣೆ ಸೋಲಿನ ಬಳಿಕ ಪರಾಮರ್ಶೆ ಬಿಎಸ್ಪಿ ರಾಷ್ಟ್ರೀಯ ಸಂಯೋಜಕರಾಗಿ ಆಕಾಶದ ಆನಂದ್ ಮರುನೇಮಕ

Recent News