ಇಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ ಓಂಬಿರ್ಲಾ, ಕೋಡಿಕುನ್ನಿಲ್ ಸುರೇಶ್ ಕಣದಲ್ಲಿ

ಇಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ ಓಂಬಿರ್ಲಾ, ಕೋಡಿಕುನ್ನಿಲ್ ಸುರೇಶ್ ಕಣದಲ್ಲಿ

ನವದೆಹಲಿ: 18 ನೇ ಲೋಕಸಭೆಯ ಸ್ಪೀಕರ್‌ಗಾಗಿ ಇಂದು ಚುನಾವಣೆ ನಡೆಯಲಿದ್ದು ಎನ್‌ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಇಂಡಿಯಾ ಬ್ಲಾಕ್‌ನ ಕೋಡಿಕುನ್ನಿಲ್ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆಯಲಿದೆ.

ಕೃಷಿಕ ಮತ್ತು ಸಮಾಜ ಸೇವಕ ಬಿರ್ಲಾ ಅವರು ತಮ್ಮ ವಿದ್ಯಾರ್ಥಿ ದಿನಗಳಿಂದಲೇ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 1991 ರಲ್ಲಿ ಭಾರತೀಯ ಯುವ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷರಾಗಿ ಮತ್ತು ರಾಷ್ಟ್ರಮಟ್ಟದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿರ್ಲಾ ಅವರು ಕೋಟಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯೂ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದಾರೆ.

ಇಂಡಿಯಾ ಬ್ಲಾಕ್ ಅಭ್ಯರ್ಥಿ ಕೆ.ಸುರೇಶ್ ಅವರು 29 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಹೆಚ್ಚು ಕಾಲ ಲೋಕಸಭಾ ಸಂಸದರಾಗಿ ಆಯ್ಕೆಯಾದವರ ಪೈಕಿ ಸುರೇಶ್‌ ಕೂಡ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಸುರೇಶ್ ಮೊದಲ ಬಾರಿಗೆ 1989 ರಲ್ಲಿ ಲೋಕಸಭೆಗೆ ಚುನಾಯಿತರಾದರು. ನಂತರ ಅವರು 1991, 1996 ಮತ್ತು 1999 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅಡೂರ್ ಕ್ಷೇತ್ರದಿಂದ ಲೋಕಸಭೆಗೆ ಸತತ ನಾಲ್ಕು ಅವಧಿಗೆ ಗೆದ್ದರು.

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಮಾವೆಲಿಕ್ಕಾರ (ಕೇರಳ)ದಿಂದ ಎಂಟನೇ ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಗೆದ್ದರು. ಈ ಹಿಂದೆ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಅವರು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರಾಗಿದ್ದಾರೆ. 17 ನೇ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯ ಸಚೇತಕರಾಗಿದ್ದರು.

Previous Post
ಅನಾರೋಗ್ಯದ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಟ್ಟ ಸಚಿವೆ ಅತಿಶಿ
Next Post
ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ಹೈಕೋರ್ಟ್ ತಡೆ

Recent News