ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಚಿವ ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದ ಕುಮಾರಸ್ವಾಮಿ ಅವರು

ನವದೆಹಲಿ: ಕೇಂದ್ರ ಸಾರಿಗೆ-ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿಯಾದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಬಾಕಿ ಇರುವ ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಿವುದು ಹಾಗೂ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವಿ ಸಲ್ಲಿಸಿದರು. ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು – ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ತ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಸಾರಿಗೆ ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು, ಈ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಕೋಲಾರ ಸಂಸದರಾದ ಮಲ್ಲೇಶ್ ಬಾಬು ಅವರು ಈ ಸಂದರ್ಭದಲ್ಲಿ ಸಚಿವರ ಜತೆಯಲ್ಲಿದ್ದರು.

Previous Post
ರಾಮನಗರದ ಕ್ರೇಡಿಟ್ ಕಿತ್ತುಕೊಳ್ಳಲು ಪ್ರಯತ್ನ ಹೆಸರು ಬದಲಾವಣೆ ಪ್ರಸ್ತಾವಣೆಗೆ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ಷೇಪ
Next Post
ರಷ್ಯಾ ಸೇನೆಯಲ್ಲಿರುವ ಭಾರತೀಯರ‌ ಬಿಡುಗಡೆಗೆ ಸಮ್ಮತಿ

Recent News