ಲೋಕಸಭೆ ಕಾಂಗ್ರೇಸ್ ಪಕ್ಷದ ಉಪನಾಯಕನಾಗಿ ಗೌರವ್ ಗೊಗೊಯ್ ನೇಮಕ

ಲೋಕಸಭೆ ಕಾಂಗ್ರೇಸ್ ಪಕ್ಷದ ಉಪನಾಯಕನಾಗಿ ಗೌರವ್ ಗೊಗೊಯ್ ನೇಮಕ

ನವದೆಹಲಿ :  ಗೌರವ್ ಗೊಗೊಯ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಉಪನಾಯಕರನ್ನಾಗಿ ಕಾಂಗ್ರೆಸ್ ನೇಮಕ ಮಾಡಿದೆ ಎಂದು ಕೆಸಿ ವೇಣುಗೋಪಾಲ್ ಭಾನುವಾರ ಮಾಹಿತಿ ನೀಡಿದ್ದಾರೆ. ಎಕ್ಸ್ ಪೊಸ್ಟ್ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದು ಸಿಪಿಪಿ ಅಧ್ಯಕ್ಷೆ ಸೋನಿಯಗಾಂಧಿ ಗೌರವ್ ಗೊಗೊಯ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಿರುವ ಇತ್ತೀಚಿನ ನೇಮಕಾತಿಗಳ ಬಗ್ಗೆ ಸೋನಿಯಾ ಗಾಂಧಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸಂಸದರಾದ ಮಾಣಿಕ್ಕಂ ಟ್ಯಾಗೋರ್ ಮತ್ತು ಡಾ ಎಂಡಿ ಜವೈದ್ ಅವರನ್ನು ವಿಪ್‌ಗಳಾಗಿ ನೇಮಿಸಲಾಗಿದೆ. ಗೌರವಾನ್ವಿತ ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ಸಚೇತಕರ ನೇಮಕದ ಬಗ್ಗೆ ಮಾನ್ಯ ಲೋಕಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳ ಜತೆಗೂಡಿ ಕಾಂಗ್ರೆಸ್‌ ಜನಪರ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ, ಕಾಂಗ್ರೆಸ್ ಮತ್ತು ಇಂಡಿಯಾ ಬಣದ ಪಕ್ಷಗಳು ಲೋಕಸಭೆಯಲ್ಲಿ ಜನರ ಸಮಸ್ಯೆಗಳಿಗೆ ಶಕ್ತಿಯುತವಾಗಿ ಹೋರಾಡುತ್ತವೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಪಕ್ಷವು ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಹೆಸರಿಸಿತ್ತು.

Previous Post
ಕಳೆದ 4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಠಿ ಮೋದಿ ಹೇಳಿಕೆಗೆ ಮಲ್ಲಿಕಾರ್ಜುನ್ ಖರ್ಗೆ ತೀವ್ರ ಖಂಡನೆ
Next Post
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಅವರೊಂದಿಗೆ ಎಚ್ಡಿ ದೇವೇಗೌಡರು ಮಾತನಾಡಿದ್ದಾರೆ

Recent News