ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಅಭಿನಂದನ ಸಮಾರಂಭ

ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಅಭಿನಂದನ ಸಮಾರಂಭ

ಮಂಡ್ಯ : ಮಂಡ್ಯ ಕ್ಷೇತ್ರದಿಂದ ಲೋಕಸಭೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಹಾಗೂ ಸಚಿವರಾಗಿ ಆಯ್ಕೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಅಭಿನಂದನ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಜಿಟಿ ದೇವೇಗೌಡ ರಾಜ್ಯದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಸಹಕಾರ ಬೇಕು ಆದರೆ ಕಾಂಗ್ರೆಸ್ ಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ.ಎಚ್ ಡಿ ದೇವೇಗೌಡರ ಕುಟುಂಬವನ್ನು ಮುಳುಗಿಸಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಿದ್ದು, ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಸಾಬೀತು ಮಾಡಿದ್ದೇವೆ. ಸಿಎಂ ಆದಾಗ ಕೊಟ್ಟಿರುವ ಕಾರ್ಯಕ್ರಮ ಜನರ ಮನಸ್ಸಿನಲ್ಲಿ ಇದೆ.ಮಂಡ್ಯದ ಜನ ಕೀರ್ತಿ ತಂದು ಕೊಟ್ಟಿದ್ದಾರೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಕ್ಕೆ ಹೆಚ್ಚು ಮತ ಬಂದಿದೆ ಎಂದರು.ನಿಖಿಲ್ ಗೆ ಹೆಚ್ಚು ಜವಾಬ್ದಾರಿ ಇದೆ ಸೋಲೆ ಗೆಲುವಿನ ಮೆಟ್ಟಿಲಾಗಿದೆ. ಪಕ್ಷ ಕಟ್ಟುವುದಾಗಿ ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಹೇಳಿದರು.ಅದರಂತೆ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡಲಿಲ್ಲ. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಜಿಟಿ ದೇವೇಗೌಡ ಜನತಾದರ್ಶನಕ್ಕೆ ಅಧಿಕಾರಿಗಳನ್ನು ಕಳುಹಿಸದೆ ದುರಹಂಕಾರ ಮೆರೆದಿದೆ ಎಂದರು.ರಾಜ್ಯದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಸಹಕಾರ ಬೇಕು ಆದರೆ ಕಾಂಗ್ರೆಸ್ ಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ.ಎಚ್ ಡಿ ದೇವೇಗೌಡರ ಕುಟುಂಬವನ್ನು ಮುಳುಗಿಸಲು ಹೊರಟಿದ್ದಾರೆ. ಕಾಂಗ್ರೆಸ್ನವರು ಬಿಜೆಪಿಯನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಅಂತಿದ್ರು. ಆದರೆ ಇದೀಗ ಕಾಂಗ್ರೆಸ್ 100 ಪರ್ಸೆಂಟ್ ಕಮಿಷನ್ ಸರ್ಕಾರ ಆಗಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶಾಸಕ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದರು. ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಪಾಂಡವಪುರ ಮಾಜಿ ಶಾಸಕ ಕೆ.ಸಿ. ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನಾರಾಯಣಗೌಡ, ಕುಮಾರಣ್ಣ ಮಂಡ್ಯ ಜಿಲ್ಲೆಗೆ ದೊಡ್ಡ ಶಕ್ತಿಯಾಗಿದ್ದಾರೆ.ಕಾಂಗ್ರೆಸ್ ಸರ್ಕಾರ ತೆಗೆಯುವ ಕೆಲಸ ಶೀಘ್ರವೇ ನಡೆಯಲಿದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕಾಂಗ್ರೆಸ್ ಸರ್ಕಾರ ತೆಗೆಯುತ್ತೇವೆ ಎಂದು ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ನಾರಾಯಣ ಗೌಡ, ಸಿದ್ದರಾಮಯ್ಯ ನಾನು ಸತ್ಯ ಹರಿಶ್ಚಂದ್ರ ಎಂದು ಹೇಳಿಕೊಳ್ಳುತ್ತಾರೆ. 15 ಸೈಟುಗಳು ಯಾರದ್ದು ಸ್ವಾಮಿ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರದ ಹಗರಣಗಳು ಬಹಳಷ್ಟು ಇವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೂರಾರು ಕೋಟಿ ಲೂಟಿ ಮಾಡಿದ್ರಲ್ಲ, ಹಣ ಲೂಟಿ ಮಾಡುವಾಗ ನೀವು ಕಣ್ಮುಚ್ಚಿ ಕುಳಿತಿದ್ರಾ ಸ್ವಾಮಿ? ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

 

Previous Post
ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Next Post
ನಾಳೆಯಿಂದ ವಿಧಾನಮಂಡಲ ಅಧಿವೇಶನ

Recent News