ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್‌ಡಿಕೆ, ಎಸ್‌ಎಂಕೆ ಅರ್ಜಿ ವಿಚಾರಣೆ ಮುಂದೂಡಿಕೆ

ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್‌ಡಿಕೆ, ಎಸ್‌ಎಂಕೆ ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ : ಜಂತಕಲ್ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ, ಎಸ್‌.ಎಂ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೂರು ವಾರಗಳಿಗೆ ಮುಂದೂಡಿದೆ.

ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಕರಣ ರದ್ದು ಮಾಡಲು ವಿರೋಧಿಸಿ ಅರ್ಜಿ ವಜಾ ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಈಗ ಸುಪ್ರೀ‌ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಪಟ್ಟಾ ಜಮೀನಿನಲ್ಲಿ ಜಂಕಲ್ ಮೈನಿಂಗ್ ಕಂಪನಿಯು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಪರವಾನಗಿ ನವೀಕರಣ ಮಾಡಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ 2007ರಲ್ಲಿ ಗಣಿಗಾರಿಕೆ ನಡೆಸಲು ಅಕ್ರಮವಾಗಿ ಪರವಾನಗಿ ನೀಡಲಾಗಿತ್ತು. ಎಸ್‌ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ 2004ರಲ್ಲಿ ಮೀಸಲು ಅರಣ್ಯ ಪಟ್ಟಿಯನ್ನು ಈ ಪ್ರದೇಶವನ್ನು ಕೈಬಿಡಲಾಗಿತ್ತು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ತಾವು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ವರದಿಯಲ್ಲಿ ಉಲ್ಲೇಖಿಸಿದ್ದಾರೆ, ಇದೇ ವರದಿ ಆಧರಿಸಿ ವಕೀಲ ವಿನೋದ್ ಕುಮಾರ್ ಮತ್ತು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಾಹಂ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಅನ್ವಯ ಪ್ರಕರಣ ದಾಖಲಾಗಿದ್ದು ಇದನ್ನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.

Previous Post
ಮಾರ್ಕೇಂಡೇಯ ಆಣೆಕಟ್ಟು ನಿರ್ಮಾಣ ಪ್ರಕರಣ ಎಂಟು ವಾರಗಳಲ್ಲಿ ಸಂಧಾನ ಸಮಿತಿ ವರದಿ ಸಲ್ಲಿಕೆಗೆ ಸುಪ್ರೀಂ ಸೂಚನೆ
Next Post
ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಇಡಿ ಸಿಬಿಐಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್

Recent News