ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸರ್ಕಾರಿ ನೌಕರರಿಗೆ ಗ್ರೀನ್ ಸಿಗ್ನಲ್!?

ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸರ್ಕಾರಿ ನೌಕರರಿಗೆ ಗ್ರೀನ್ ಸಿಗ್ನಲ್!?

ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಭೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದು ಹಾಕಲಾಗಿದೆ ಎಂದು ಕಳೆದ ವಾರದ ಸರ್ಕಾರದ ಆದೇಶವೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಆರೋಪಿಸಿದೆ.

ಜುಲೈ 9 ರಂದು ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದೆ ಎನ್ನಲಾದ ಆದೇಶ ಪ್ರತಿಯ ಫೋಟೋವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
1948ರ ಫೆಬ್ರವರಿಯಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಸರ್ದಾರ್ ಪಟೇಲ್ ಆರ್‌ಎಸ್‌ಎಸ್ ಅನ್ನು ನಿಷೇಧಿಸಿದ್ದರು. ತರುವಾಯ, ಉತ್ತಮ ನಡವಳಿಕೆಯ ಭರವಸೆಯ ಮೇಲೆ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು.

ಇದಾದ ನಂತರವೂ ಆರ್‌ಎಸ್‌ಎಸ್ ನಾಗಪುರದಲ್ಲಿ ತಿರಂಗವನ್ನು ಹಾರಿಸಲಿಲ್ಲ. 1966 ರಲ್ಲಿ, ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರು ಭಾಗವಹಿಸುವುದಕ್ಕೆ ನಿಷೇಧ ಹೇರಲಾಯಿತು. ಜೂನ್ 4, 2024ರ ನಂತರ, ಸ್ವಯಂ-ಅಭಿಷಿಕ್ತ ಜೈವಿಕ ಅಲ್ಲದ ಪ್ರಧಾನಿ ಮತ್ತು ಆರ್‌ಎಸ್‌ಸ್‌ ನಡುವಿನ ಸಂಬಂಧಗಳು ಹದಗೆಟ್ಟವು. ಜುಲೈ 9, 2024 ರಂದು, ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೂ ಜಾರಿಯಲ್ಲಿದ್ದ 58 ವರ್ಷಗಳ ನಿಷೇಧವನ್ನು ತೆಗೆದುಹಾಕಲಾಯಿತು. ಅಧಿಕಾರಿಗಳು ಇನ್ನು ಮುಂದೆ ಚೆಡ್ಡಿ ತೊಟ್ಟು ಬರಬಹುದು ಎಂಬುವುದು ನನ್ನ ಭಾವನೆ” ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಕೂಡಾ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

Previous Post
ಇಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಹೊಸ ಇತಿಹಾಸ ಬರೆಯಲಿರುವ ವಿತ್ತ ಸಚಿವೆ ನಿರ್ಮಲ ಸೀತರಾಮನ್
Next Post
ಆರ್ಥಿಕ ಪ್ರಗತಿಯತ್ತ ಕೊಂಡಯ್ಯುವ ಬಜೆಟ್ – ಜೋಶಿ

Recent News