ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ  ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ  ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು. ಬಿಜೆಪಿ , ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು  ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.

Previous Post
ಕರ್ನಾಟಕ, ಹಿಮಾಚಲ್‌, ಅಸ್ಸಾಂಗೆ ಹೆಚ್ಚಿನ ಪರಿಹಾರ ನೀಡಲಾಗಿದೆ- ಕೇಂದ್ರ
Next Post
ನೆರೆ ರಾಜ್ಯಗಳಿಗೆ ಆನೆ ಸೆರೆ ಕೌಶಲ್ಯ ವರ್ಗಾವಣೆ – ಅರಣ್ಯ ಸಚಿವರು ಆಂಧ್ರಪ್ರದೇಶಕ್ಕೆ ಆನೆ ನೀಡುವ ಬಗ್ಗೆ ಶೀಘ್ರ ನಿರ್ಧಾರ: ಈಶ್ವರ ಖಂಡ್ರೆ

Recent News