ಚನ್ನಪಟ್ಟಣ ಟಿಕೆಟ್ ಫೈಟ್ ; ಇಂದು ವರಿಷ್ಠರ ಭೇಟಿಯಾಗಲಿರುವ ಸಿಪಿವೈ

ಚನ್ನಪಟ್ಟಣ ಟಿಕೆಟ್ ಫೈಟ್ ; ಇಂದು ವರಿಷ್ಠರ ಭೇಟಿಯಾಗಲಿರುವ ಸಿಪಿವೈ

ನವದೆಹಲಿ : ಚನ್ನಪಟ್ಟಣ ಉಪ ಚುನಾವಣೆ ಒಕ್ಕಲಿಗ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ, ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿರುವ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಟಿಕೆಟ್ ಬಗ್ಗೆ ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ.

ಇಂದು ದೆಹಲಿಯಲ್ಲಿ ಸಿ.ಪಿ ಯೋಗೇಶ್ವರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ.‌ ಭೇಟಿ ವೇಳೆ ಟಿಕೆಟ್ ಯಾಕೆ ನೀಡಬೇಕು, ಅದರಿಂದಾಗುವ ಲಾಭಗಳೇನು? ಒಂದು ವೇಳೆ ಟಿಕೆಟ್ ನಿರಾಕರಿಸಿದರೆ ತಮ್ಮ ಮುಂದಿನ ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗಿದೆ.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಈಗಾಗಲೇ ನಮ್ಮ ಕ್ಷೇತ್ರದ ಜನ ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ ಎಂದು ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಎಂಎಲ್ ಸಿ, “ನಾನು ಕಾಂಗ್ರೆಸ್ ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನ ಮಾತಾಡಿಸಿಯೂ ಇಲ್ಲ. ಡಿಕೆಶಿ ಅವರು ಏನೇನೋ ಮಾತಾಡ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ’ ಎಂದು ಟಾಂಗ್ ನೀಡಿದರು.

Previous Post
ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ಅರವಿಂದ್ ಕೇಜ್ರಿವಾಲ್
Next Post
ಯುಜಿಸಿ-ನೆಟ್ ರದ್ದು ಪ್ರಶ್ನಿಸಿದ್ದ ಪಿಐಎಲ್ ವಜಾ

Recent News