ಬಿಸ್ಕತ್ ಸೇವನೆ ಬಳಿಕ ಹಾಸ್ಟೇಲ್ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು

ಬಿಸ್ಕತ್ ಸೇವನೆ ಬಳಿಕ ಹಾಸ್ಟೇಲ್ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು

ಮುಂಬೈ : ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಕಾರ್ಯಕ್ರಮದ ಭಾಗವಾಗಿ ನೀಡಲಾದ ಬಿಸ್ಕತ್‌ಗಳನ್ನು ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇಕೇಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ 8:30 ರ ಸುಮಾರಿಗೆ ಬಿಸ್ಕೆಟ್ ಸೇವಿಸಿದ ನಂತರ ಮಕ್ಕಳಿಗೆ ವಾಕರಿಕೆ ಮತ್ತು ವಾಂತಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಷಯ ತಿಳಿದ ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳು ಕೂಡಲೇ ಶಾಲೆಗೆ ಆಗಮಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು. ವಿದ್ಯಾರ್ಥಿಗಳನ್ನು ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವಿವರಿಸಲಾಗಿದೆ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಬಾಸಾಹೇಬ್ ಘುಘೆ ಮಾತನಾಡಿ, ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಬಿಸ್ಕೆಟ್ ಸೇವಿಸಿದ 257 ವಿದ್ಯಾರ್ಥಿಗಳು ವಿಷಾಹಾರದ ಲಕ್ಷಣ ಕಂಡು ಬಂದಿದ್ದು, 153 ಮಂದಿಯನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಕೆಲವರಿಗೆ ಚಿಕಿತ್ಸೆ ನೀಡಲಾಗಿದ್ದು ಮನೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಆದಾಗ್ಯೂ, ತೀವ್ರ ರೋಗಲಕ್ಷಣಗಳನ್ನು ಹೊಂದಿರುವ ಏಳು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರ ಸಿವಿಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಘುಘೆ ಹೇಳಿದ್ದಾರೆ. ಶಾಲೆಯಲ್ಲಿ 296 ವಿದ್ಯಾರ್ಥಿಗಳಿದ್ದಾರೆ. ಆಹಾರ ವಿಷಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ

Previous Post
ಲಂಡನ್ ನಲ್ಲಿ ತಂಗಿದ್ದ ಏರ್ ಇಂಡಿಯಾದ ಮಹಿಳಾ ಸಿಬ್ಬಂದ ಮೇಲೆ ಹಲ್ಲೆ
Next Post
ರಾಜ್ಯಪಾಲರ ನಡೆ ವಿರುದ್ಧ ರಾಜ್ಯದಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

Recent News