ಇಂದಿರಾ ಗಾಂಧಿಯಂತೆ ಮಮತಾರನ್ನು ಹತ್ಯೆ ಮಾಡಿ ಎಂದಿದ್ದ ವಿದ್ಯಾರ್ಥಿನಿ ಬಂಧನ

ಕೋಲ್ಕತ್ತಾ, ಆ. 19: ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಬಗ್ಗೆ ಇಡೀ ದೇಶವೇ ಮರುಗುತ್ತಿದೆ. ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ರಾಜ್ಯ ಸರ್ಕಾರದ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಎಂದು ಪೋಸ್ಟ್​ ಮಾಡಿದ್ದ ಕೀರ್ತಿ ಎಂಬ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಕೆ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದಾಳೆ, ಕೀರ್ತಿ ಸೋಶಿಯಲ್ ಇನ್​ಸ್ಟಾ ಹ್ಯಾಂಡಲ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೀರ್ತಿ ಶರ್ಮಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ರೀತಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಎಂದು ಕೊಲೆ ಪ್ರೇರಣೆ ನೀಡಿದ್ದ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆ ವೈದ್ಯೆಯ ಭಾವಚಿತ್ರ ಹಾಗೂ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ತಳ್ತಾಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ವಿರುದ್ಧ ಎರಡು ಪೋಸ್ಟ್​ಗಳನ್ನು ಶೇರ್ ಮಾಡಿದ್ದಾರೆ.

ಪ್ರಚೋದನಕಾರಿ ಕಮೆಂಟ್​ ಹಾಗೂ ಮುಖ್ಯಮಂತ್ರಿಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ, ಇದು ಸಮಾಜದಲ್ಲಿ ಶಾಂತಿ ಕದಡುವಿಕೆಗೆ ಕಾರಣವಾಗುತ್ತದೆ, ಇದು ದ್ವೇಷಕ್ಕೆ ಕಾರಣವಾಗಬಹುದು. ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಧ್ವನಿಯೆತ್ತಿದ್ದಕ್ಕಾಗಿ ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಮತ್ತೊಬ್ಬ ಯುವಕನನ್ನು ಬಂಧಿಸಿದ್ದಾರೆ.

23 ವರ್ಷದ ಸಾಗ್ನಿಕ್ ಲಾಹಾ ಎಂದು ಗುರುತಿಸಲಾಗಿದ್ದು, ಆರೋಪಿ ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನನ್ನು ಗುರಿಯಾಗಿಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಮಮತಾ ಬ್ಯಾನರ್ಜಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

Previous Post
ಭೂಕುಸಿತ ಸಂತ್ರಸ್ಥರ ಸಾಲ ಮನ್ನಾ ಮಾಡಿ – ಬ್ಯಾಂಕ್‌ಗಳಿಗೆ ಪಿಣರಾಯಿ ವಿಜಯನ್ ಮನವಿ
Next Post
ಸಾರ್ವಜನಿಕರ ಕೋಪಕ್ಕೊಳಗಾದರೆ ನಾವು ಕಾಪಾಡಲ್ಲ: ವೈದ್ಯರಿಗೆ ಟಿಎಂಸಿ ಸಂಸದ ಎಚ್ಚರಿಕೆ

Recent News