Union Home Minister Amit Shah announces establishment of five new districts in Ladakh

ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳ ಸ್ಥಾಪನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

Union Home Minister Amit Shah announces establishment of five new districts in Ladakh
Union Home Minister Amit Shah announces establishment of five new districts in Ladakh

ನವದೆಹಲಿ : ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಸದ್ಯ ಲಡಾಕ್ ನಲ್ಲಿ ಲೇಹ್ ಮತ್ತು ಕಾರ್ಗಿಲ್ ಎರಡು ಜಿಲ್ಲೆಗಳಿದ್ದು ಹೆಚ್ಚುವರಿಯಾಗಿ ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಹೊಸ ಜಿಲ್ಲೆಗಳಾಗಿ ಸ್ಥಾಪನೆಯಾಗಲಿವೆ. ಈ ಬಗ್ಗೆ ಎಕ್ಸ್ ಪೊಸ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಗೃಹ ಸಚಿವ ಅಮಿತ್ ಶಾ, ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ಅನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಯ ಅನ್ವೇಷಣೆಯಲ್ಲಿ, ಕೇಂದ್ರಾಡಳಿತ ಪ್ರದೇಶದಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಇಲಾಖೆ ನಿರ್ಧರಿಸಿದೆ.  ಹೊಸ ಜಿಲ್ಲೆಗಳಾದ ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್‌ಥಾಂಗ್, ಪ್ರತಿಯೊಂದು ಮೂಲೆ ಮೂಲೆಯಲ್ಲಿಯೂ ಆಡಳಿತವನ್ನು ಬಲಪಡಿಸುವ ಮೂಲಕ ಜನರಿಗೆ ಮೀಸಲಾದ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ ಎಂದು ಹೇಳಿದ್ದಾರೆ.

Previous Post
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ‌ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
Next Post
ಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ

Recent News