The Governor clarified that there is no pending appeal for prosecution permission

ಪ್ರಾಸಿಕ್ಯೂಷನ್ ಅನುಮತಿ ಮನವಿ ಬಾಕಿ ಇಲ್ಲ ಎಂದು ರಾಜ್ಯಪಾಲರು ಸ್ಪಷ್ಟನೆ

ಬೆಂಗಳೂರು: ರಾಜಭವನದಲ್ಲಿ ಯಾವುದೇ ಪ್ರಾಸಿಕ್ಯೂಷನ್ ಅನುಮತಿ ಮನವಿ ಬಾಕಿ ಇಲ್ಲ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿಗಳ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಅನುಮತಿ ನೀಡಿ ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪ ಹಸಿ ಸುಳ್ಳು ಮಾತ್ರ ಎಂದು ಸಾಬೀತಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಚಾಟಿ ಬೀಸಿದ್ದಾರೆ.ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಈ ಬಗ್ಗೆ ಸಂದೇಶ ಹಂಚಿಕೊಂಡಿರುವ ಅವರು, ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಲು ಹೊರಟಿರುವುದು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸರ್ಕಾರದ ಸರಣಿ ಭ್ರಷ್ಟಾಚಾರ ಬಯಲಾದಾಗಿನಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಆದಿಯಾಗಿ ಹಲವಾರು ಕಾಂಗ್ರೆಸ್ ನಾಯಕರು ಸಂವಿಧಾನಿಕ ಹುದ್ದೆ ಎಂಬುದನ್ನೂ ಮರೆತು ರಾಜ್ಯಪಾಲರನ್ನ ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಬಾಂಗ್ಲಾದೇಶದ ರೀತಿ ದಾಳಿ ಮಾಡುವ ಬೆದರಿಕೆ ಒಡ್ಡುವುದು, ಎಂದು ನ್ಯಾಯಾಲಯದಲ್ಲಿ ಆರೋಪ ಹೊರಿಸುವುದು, ಬಿಜೆಪಿ ಏಜೆಂಟ್ ಎಂದು ಛೇಡಿಸುವುದು, ಹೀಗೆ ಒಂದಲ್ಲ ಒಂದು ರೀತಿಯಲ್ಲಿ ರಾಜ್ಯಪಾಲರಿಗೆ ಅಗೌರವ ತೋರುತ್ತಲೇ ಬಂದಿದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

Previous Post
ಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ: ಪರಮೇಶ್ವರ
Next Post
ಬೆಂಗಳೂರಿನಲ್ಲಿ : ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅನಾವರಣ

Recent News