KC Tyagi has resigned from the post of JDU spokesperson

ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಸಿ.ತ್ಯಾಗಿ

ಪಾಟ್ನಾ: ಬಿಹಾರ್ ಸಿಎಂ ನಿತೀಶ್ ಕುಮಾರ್ ಅವರ ಪಕ್ಷದ ನಾಯಕ ಕೆ.ಸಿ.ತ್ಯಾಗಿ ಅವರು ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಯು ಹಿರಿಯ ನಾಯಕ ಕೆ.ಸಿ.ತ್ಯಾಗಿ ಅವರು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ಸಿಎಂ ನಿತೀಶ್ ಕುಮಾರ್ ನೇಮಿಸಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪಕ್ಷ ತಿಳಿಸಿದೆ.

ಕಳೆದ ಕೆಲವು ತಿಂಗಳುಗಳಿಂದ ನಾನು ಟಿವಿ ಚರ್ಚೆಗಳಿಂದ ದೂರವಿರುವುದನ್ನು ನೀವು ಗಮನಿಸಿರಬೇಕು. ಬೇರೆ ಕೆಲಸಗಳಿಂದಾಗಿ ವಕ್ತಾರ ಹುದ್ದೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ನನ್ನನ್ನು ಈ ಜವಾಬ್ದಾರಿಯಿಂದ ಮುಕ್ತಗೊಳಿಸಿ. ನಿಮ್ಮ ಮತ್ತು ಬಿಹಾರ ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ಮಾಡಲು ನಾನು ಲಭ್ಯವಿರುತ್ತೇನೆ ಎಂದು ಸಿಎಂಗೆ ತ್ಯಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯ ನಂತರ ಮೂರನೇ ಅವಧಿಗೆ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸಿದ ಪ್ರಮುಖ ಮಿತ್ರಪಕ್ಷಗಳಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಸೇರಿದೆ. ಆಡಳಿತಾರೂಢ ಎನ್‌ಡಿಎ ಬಣದಲ್ಲಿ ಸಮನ್ವಯತೆ ಕಾಯ್ದುಕೊಳ್ಳುವಂತೆ ಬಿಜೆಪಿಯು ಮಿತ್ರಪಕ್ಷಗಳನ್ನು ಕೇಳಿಕೊಂಡಿದೆ ಎಂದು ತಿಳಿದುಬಂದಿದೆ.

 

Previous Post
ಬೆಂಗಳೂರಿನಲ್ಲಿ : ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅನಾವರಣ
Next Post
ನಮಾಜ್ ಮಾಡಲು ನೀಡುತ್ತಿದ್ದ ಬ್ರೇಕ್ ಹಿಂತೆಗೆದುಕೊಂಡ ಅಸ್ಸಾಂ ಸರ್ಕಾರ ಎನ್‌ಡಿಎ ಮೈತ್ರಿಕೂಟದಿಂದಲೇ ವಿರೋಧ ವ್ಯಕ್ತ

Recent News