ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಮೋದಿ ಗಿಫ್ಟ್ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 100 ರೂ. ಕಡಿತ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಮೋದಿ ಗಿಫ್ಟ್ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 100 ರೂ. ಕಡಿತ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗುಡ್‌ ನ್ಯೂಸ್. ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 100 ರೂ. ಕಡಿತಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮಹಿಳಾ ದಿನಾಚರಣೆಯಂದು ದರವನ್ನು ಕಡಿಮೆ ಮಾಡಿದ್ದೇವೆ ಎಂದು ಬರೆದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು ಇಂದು ಮಹಿಳಾ ದಿನ. ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 100 ರೂ. ಇಳಿಕೆ ಮಾಡಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.

ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮ ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಮಹಿಳೆಯರ ಸಬಲೀಕರಣ ಹಾಗೂ ಹೆಣ್ಣುಮಕ್ಕಳು ಸುಲಭವಾಗಿ ಜೀವನ ಸಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

Previous Post
ಲೋಕಸಭೆ ಚುನಾವಣೆ: ಶೇ.50 ರಷ್ಟು ಅಭ್ಯರ್ಥಿಗಳ ಬಗ್ಗೆ ನಿರ್ಣಯ: ಡಿಸಿಎಂ ಡಿ.ಕೆ. ಶಿವಕುಮಾರ್
Next Post
ಪಾಕಿಸ್ತಾನಕ್ಕೆ ಸ್ವಾತಂತ್ರ್ಯೋತ್ಸವದ ಶುಭಕೋರುವುದು ಅಪರಾಧವಲ್ಲ: ಸುಪ್ರೀಂ

Recent News