ಕರ್ನಾಟಕ ಸೇರಿ 13 ರಾಜ್ಯಗಳಲ್ಲಿ ಇಂದು ಎರಡನೇ ಹಂತದ ಮತದಾನ ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ

ಕರ್ನಾಟಕ ಸೇರಿ 13 ರಾಜ್ಯಗಳಲ್ಲಿ ಇಂದು ಎರಡನೇ ಹಂತದ ಮತದಾನ ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ

ನವದೆಹಲಿ : ಕರ್ನಾಟಕದ 14 ಸೇರಿ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಕರ್ನಾಟಕದ ಜೊತೆಗೆ ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿವೆ.

ಅಸ್ಸಾಂನಲ್ಲಿ 5, ಬಿಹಾರದಲ್ಲಿ 5, ಛತ್ತೀಸ್‌ಗಢದಲ್ಲಿ 3, ಕೇರಳದಲ್ಲಿ 20, ಮಧ್ಯಪ್ರದೇಶದಲ್ಲಿ 7, ಮಹಾರಾಷ್ಟ್ರದಲ್ಲಿ 8, ಮಣಿಪುರದಲ್ಲಿ 1, ರಾಜಸ್ಥಾನದಲ್ಲಿ 13, ತ್ರಿಪುರಾ ಹಾಗೂ ಉತ್ತರ ಪ್ರದೇಶದಲ್ಲಿ ತಲಾ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಲೋಕಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

‍73 ಸಾಮಾನ್ಯ, 6 ಎಸ್ಟಿ, 9 ಎಸ್ಸಿ ಕ್ಷೇತ್ರಗಳು ಒಳಗೊಂಡಿದ್ದು 8.08 ಕೋಟಿ ಪುರುಷರು, 7.8 ಕೋಟಿ ಮಹಿಳೆಯರು, 5929 ತೃತಿಯ ಲಿಂಗಿ ಮತದಾರರು ಸೇರಿ 15.88 ಕೋಟಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. 3.28 ಯುವ ಮತದಾರರಿದ್ದು ಈ ಪೈಕಿ 34.8 ಲಕ್ಷ ಯುವ ಮತದಾರರಿಂದ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 14.78 ಲಕ್ಷ 85+ ವರ್ಷ ಮೇಲ್ಪಟ್ಟ, 42,226 100+ ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. 1098 ಪುರುಷ, 102 ಮಹಿಳಾ, 02 ತೃತಿಯಲಿಂಗಿ ಸೇರಿ ಒಟ್ಟು 1202 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ವ್ಯವಸ್ಥಿತ ಮತದಾನಕ್ಕಾಗಿ 4740 ಚುನಾವಣಾ ಬೂತ್ ಗಳ ನಿರ್ಮಾಣ ಮಾಡಿದ್ದು 16 ಲಕ್ಷ ಸಿಬ್ಬಂದಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದೆ. ಮೂರು ಹೆಲಿಕಾಪ್ಟರ್, ನಾಲ್ಕು ಟ್ರೈನ್, 80,000 ವಾಹನಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಿದೆ. 251 ಚುನಾವಣಾ ವೀಕ್ಷಕರ ನೇಮಕ ಮಾಡಿದ್ದು ಮದ್ಯ ಮಾಧಕ ವಸ್ತುಗಳ ಸಾಗಾಟ ತಡೆಯಲು 1237 ರಾಜ್ಯಗಳ ಗಡಿಯಲ್ಲಿ, 263 ರಾಷ್ಟ್ರೀಯ ಗಡಿಯಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಮಾಡಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಮತದಾನಕ್ಕೆ ಸಂಪೂರ್ಣ ಸಿದ್ಧತೆಯಾಗಿದೆ. 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು 1.40 ಲಕ್ಷ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸುಮಾರು 2.88 ಕೋಟಿ ಮತದಾರರು ಹಕ್ಕು ಚಲಾಯಿಸಿಲಿದ್ದಾರೆ. ಚುನಾವಣಾ ಅಕ್ರಮಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಸುಮಾರು 50 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ

ದೇಶದ ಗಮನ ಸೆಳೆದ ಪ್ರತಿಷ್ಠಿತ ಮತ್ತು ಪ್ರಮುಖ ಕ್ಷೇತ್ರಗಳು ಈ 2ನೇ ಹಂತದಲ್ಲಿ ಮತದಾನದಲ್ಲಿವೆ. ಕರ್ನಾಟಕದ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ಮೈಸೂರು, ಬಿಹಾರದ ಕಿಶನ್‌ಗಂಜ್, ಅಸ್ಸಾಂನ ಸಿಲ್ಚಾರ್; ಛತ್ತೀಸ್‌ಗಢದಲ್ಲಿ ಕಂಕೇರ್, ಕೇರಳದ ವಯನಾಡ್, ಕೋಝಿಕ್ಕೋಡ್, ತಿರುವನಂತಪುರಂ, ಮಧ್ಯಪ್ರದೇಶದಲ್ಲಿ ದಾಮೋಹ್ ಮತ್ತು ರೇವಾ; ಮಹಾರಾಷ್ಟ್ರದ ಅಕೋಲಾ, ಅಮರಾವತಿ, ಮಣಿಪುರದ ಹೊರವಲಯ ಮಣಿಪುರ; ರಾಜಸ್ಥಾನದ ಬಾರ್ಮೆರ್, ಕೋಟಾ, ಜಲೋರ್, ಅಜ್ಮೀರ್; ಉತ್ತರ ಪ್ರದೇಶದ ಮಥುರಾ ಮತ್ತು ಅಲಿಗಢ, ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮತ್ತು ಬಲೂರ್‌ಘಾಟ್, ಜಮ್ಮು ಮತ್ತು ಕಾಶ್ಮೀರದಲ್ಲಿ ಜಮ್ಮು ಕ್ಷೇತ್ರ ಸೇರಿದೆ.

Previous Post
ಕರ್ನಾಟಕ ಕಾಂಗ್ರೇಸ್ ಸರ್ಕಾರ ಓಬಿಸಿ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ನೀಡಿದೆ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
Next Post
ಕೆಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Recent News