ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುವಂತೆ ನಾವು ಒತ್ತಾಯಿಸಿದ್ದರೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ: ಖಾರವಾಗಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುವಂತೆ ನಾವು ಒತ್ತಾಯಿಸಿದ್ದರೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ: ಖಾರವಾಗಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಇಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದರು.

ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಪ್ರಶ್ನಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿದರು.

ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.

Previous Post
ಮೋದಿ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಖಂಡನೆ
Next Post
ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ:ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ

Recent News