ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ವಿಜಯ್ ದಿವಸ್‌ ಆಚರಿಸಿದ ಪ್ರಧಾನಿ ಮೋದಿ

ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ವಿಜಯ್ ದಿವಸ್‌ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ : ಕಾರ್ಗಿಲ್ ದಿವಸ್ ಹಿನ್ನಲೆ ಶುಕ್ರವಾರ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಹುತಾತ್ಮರಿಗೆ ಗೌರವ ಸಲ್ಲಿಸಿದ ಬಳಿಕ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿರುವ ಮ್ಯೂಸಿಯಂಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದಲ್ಲಿ ಹುತಾತ್ಮರ ಯೋಧರ ಫೋಟೋಗಳನ್ನು ವೀಕ್ಷಿಸಿದರು. ಇತ್ತ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೌರವ ಸಲ್ಲಿಸಿದರು.

ಬಳಿಕ ಮಾತನಾಡಿದ ಪ್ರಧಾನಿ ಮೋದಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಸೈನಿಕರು ಮಾಡಿದ ತ್ಯಾಗ ಅಮರ ಮತ್ತು ಕಾರ್ಗಿಲ್ ವಿಜಯ್ ದಿವಸ್ ರೂಪದಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತದೆ. ಪಾಕಿಸ್ತಾನವು ದುಸ್ಸಾಹಸ ನಡೆಸಿದಾಗಲೆಲ್ಲಾ ಸೋಲನ್ನು ಎದುರಿಸಿದೆ. ಅದು ಇತಿಹಾಸದಿಂದ ಯಾವುದೇ ಪಾಠಗಳನ್ನು ಕಲಿತಿಲ್ಲ. ಅದು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಕಾರ್ಗಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕ್ ವಿರುದ್ಧ ಕಿಡಿಕಾರಿದ್ದಾರೆ.

ಬಳಿಕ ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನಡುವೆ ಎಲ್ಲಾ ಹವಾಮಾನದಲ್ಲೂ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿರುವ ಸುರಂಗ ನಿರ್ಮಾಣಕ್ಕಾಗಿ ಮೊದಲ ಸ್ಫೋಟ ನಡೆಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಜಮ್ಮುವಿನಲ್ಲಿ ‘ಕಾರ್ಗಿಲ್ ವಿಜಯ್ ದಿವಸ್’ನ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕೋಲ್ಕತ್ತಾದ ಫೋರ್ಟ್ ವಿಲಿಯಂನಲ್ಲಿ ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಸಮಾರಂಭದಲ್ಲಿ ಏರ್ ಚೀಫ್ ಮಾರ್ಷಲ್ ಅರೂಪ್ ರಾಹಾ ಕಾರ್ಗಿಲ್ ಯುದ್ಧದ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದಂದು ಕಾರ್ಗಿಲ್ ಯುದ್ಧದ ಹುತಾತ್ಮರಿಗೆ ಲಕ್ನೋದ ಸ್ಮೃತಿಕಾ ಯುದ್ಧ ಸ್ಮಾರಕದಲ್ಲಿ ಗೌರವ ಸಲ್ಲಿಸಿದರು.

Previous Post
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ
Next Post
ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

Recent News