ಕಾವೇರಿ ನೀರು -ತಮಿಳುನಾಡು ಅರ್ಜಿಯನ್ನು ತಿರಸ್ಕರಿಸಿದೆ- ನೀರು ನಿಯಂತ್ರಣ ಸಮಿತಿ

ಕಾವೇರಿ ನೀರು -ತಮಿಳುನಾಡು ಅರ್ಜಿಯನ್ನು ತಿರಸ್ಕರಿಸಿದೆ- ನೀರು ನಿಯಂತ್ರಣ ಸಮಿತಿ

ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಇದರ ನಡುವೆ ಏಪ್ರಿಲ್ ಹಾಗೂ ಮೇ ತಿಂಗಳ ತಮಿಳುನಾಡಿನ ಪಾಲಿನ ನೀರನ್ನು ಬಿಡುವಂತೆ ಅರ್ಜಿ ಸಲ್ಲಿಸಿದ ತಮಿಳುನಾಡು ಸರ್ಕಾರಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಬರಿಗೈಯಲ್ಲಿ ವಾಪಸ್ ಕಳಿಸಿದೆ. ನೀರು ಬಿಡುವಂತೆ ಸಲ್ಲಿಕೆ ಮಾಡಿದ ಅರ್ಜಿಯನ್ನು ತಿರಸ್ಕರಿಸಿದೆ. ಯಾರಾದ್ರೂ ಹಾಳಾಗೋಗ್ಲಿ ನಾವು ನೆಟ್ಟಗಿದ್ದರೆ ಸಾಕು ಎನ್ನುವ ಮನಸ್ಥಿತಿಯಿಂದ ಕರ್ನಾಟಕದಲ್ಲಿ ಜನರು ಬರಗಾಲದಿಂದ ತತ್ತರಿಸಿ ಹೋಗಿದ್ದರೂ, ತಮಗೆ ಸಾಮಾನ್ಯ ವರ್ಷಗಳಂತೆ ನೀರು ಕೊಡಬೇಕು ಎಂದು ತಮಿಳುನಾಡು ಕಾವೇರಿ ನೀರು ನಿಯಂತ್ರಣ ಸಮಿತಿಗೆ ಅರ್ಜಿ ಸಲ್ಲಿಕೆ ಮಾಡಿತ್ತು. ನಮಗೆ ಕರ್ನಾಟಕದಿಂದ ಏಪ್ರಿಲ್ ಮತ್ತು ಮೇ ತಿಂಗಳ ನೀರನ್ನು ಬಿಟ್ಟಿಲ್ಲ. ಕೂಡಲೇ ಸುಪ್ರೀಂ ಕೋರ್ಟ್‌ ನೇಮಕ ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿಯಿಂದ ತಮಿಳುನಾಡಿಗೆ ನೀರನ್ನು ಹರಿಸುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿತ್ತು.ತಮಿಳುನಾಡಿನ ಅರ್ಜಿಯನ್ನು ಸ್ವೀಕರಿಸಿ ಪರಿಶೀಲನೆ ಮಾಡಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡು ಸರ್ಕಾರಕ್ಕೆ ಛೀಮಾರಿ ಹಾಕಿದೆ.ಕರ್ನಾಟಕದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಇಲ್ಲ. ಅಲ್ಲಿನ ಜನರಿಗೆ ಕುಡಿಯುವ ನೀರಿಗೂ ಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಉತ್ತರಿಸಿದೆ.ಇನ್ನು ಕಾವೇರಿ ನೀರಿನ ಬಿಕ್ಕಟ್ಟು ಬಗೆಹರಿಸಲು ಸುಪ್ರೀಂ ಕೋರ್ಟ್ ಆದೇಶದಂತೆ ಸ್ಥಾಪಿಸಲಾದ ಕಾವೇರಿ ನೀರು ನಿಯಂತ್ರಣ ಸಮಿತಿ 2023-24ನೇ ಸಾಲಿನ ಮಳೆಗಾಲದ ನೀರು ಹಂಚಿಕೆ ಸಭೆಯು ಪೂರ್ಣಗೊಂಡಿದೆ. ಆದರೆ, ಮತ್ತೊಂದು ಸಂಸ್ಥೆಯಾದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯು ಮೇ 16ರಂದು ನಡೆಯಲಿದೆ. ಈ ಸಭೆಯು ಈ ಸಾಲಿನ ಮಳೆಗಾಲದ ಕಾವೇರಿ ನೀರು ಹಂಚಿಕೆಯ ಕೊನೆಯ ಸಭೆಯಾಗಿದೆ. ಈ ಸಭೆಯಲ್ಲಿಯೂ ನೀರು ಬಿಡುವಂತೆ ಆದೇಶ ನೀಡದಿದ್ದರೆ ಕರ್ನಾಟಕಕ್ಕೆ ಕುಡಿಯುವ ನೀರನ್ನು ನಿರ್ವಹಣೆ ಮಾಡುವುದು ಸುಲಭವಾಗುತ್ತದೆ. ಒಂದು ವೇಳೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದರೆ, ರಾಜ್ಯಕ್ಕೆ ಸಂಕಷ್ಟ ಎದುರಾಗಲಿದೆ.

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬೆಂಗಳೂರಿನ ಸೆಷನ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ FIR ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ? ನೀವು ವಿಚಾರಣಾ ನ್ಯಾಯಾಲಯದಲ್ಲಿ ನೆರವಾಗಿ ಹಾಜರಾಗಬಹುದಿತ್ತಲ್ಲ? ಎಂದು ಶಾಸಕ ಎಚ್ ಡಿ ರೇವಣ್ಣ ಪರ ಹಿರಿಯವ ವಕೀಲರಿಗೆ ವಿಶೇಷ ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದೆ.ಈ ವೇಳೆ ರೇವಣ್ಣ ಪರ ಹಿರಿಯ ವಕೀಲರು ವಾದ ಮಂಡಿಸಿ ಎಫ್‌ಐಆರ್ ನಲ್ಲಿ ಜಾಮೀನು ನೀಡಬೇಕಾದಂತಹ ಆರೋಪಗಳಿವೆ.ಆದರೆ ಮ್ಯಾಜಿಸ್ಟ್ರೇಟಿಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ.ಇದಕ್ಕೆ ಪೂರಕವಾಗಿ ರೇವಣ್ಣ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಎಚ್ ಡಿ ರೇವಣ್ಣ ಪರ ಹಿರಿಯ ಮೂರ್ತಿ ಡಿ ನಾಯಕ್ ವಾದ ಮಂಡಿಸಿದರು.ಎಸ್‌ಐಟಿ ಸಲ್ಲಿಸಿದ ಅರ್ಜಿಯವರ ಇನ್ನೂ ಲಭ್ಯವಾಗಿಲ್ಲ. ಮಧ್ಯಂತರ ಜಾಮೀನು ನೀಡಲು ಎಚ್ಡಿ ರೇವಣ್ಣ ಪರ ವಕೀಲರು ಮನವಿ ಮಾಡಿದರು.ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ನಿರೀಕ್ಷಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಶೇಷ ಕೋರ್ಟಿನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ನೀಡಿದರು.

 

ಎರಡನೆ ಹಂತದ ಲೋಕಸಭೆ ಚುನಾವಣೆ-

ರಾಜ್ಯದ 34,110 ಮಂದಿ ಮನೆಯಿಂದಲೇ ಮತದಾನ

 

ಬೆಂಗಳೂರು : ಎರಡನೆ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ, ನೋಂದಾಯಿತ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಸೇರಿ 34,110 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಈ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ ಒಟ್ಟು 23,213 ಜನರು ನೋಂದಣಿ ಮಾಡಿಕೊಂಡಿದ್ದು, ಆಪೈಕಿ 21,892 ವೃದ್ಧರು ತಮ್ಮ ಹಕ್ಕು ಚಲಾಯಿಸಿದ್ದಾರೆ. 10,897ಮಂದಿ ವಿಕಲಚೇತನರು ನೋಂದಾಯಿಸಿಕೊಂಡಿದ್ದು, ಇದರಲ್ಲಿ 10,566 ಮಂದಿ ಮತ ಚಲಾಯಿಸಿದ್ದಾರೆ ಎಂದು ಆಯೋಗ ತಿಳಿಸಿದೆ.ಮೇ 3ರ ವರೆಗೆ ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಮತದಾನ ಮಾಡಬಹುದಾಗಿದೆ. ಎರಡನೇ ಹಂತದಲ್ಲಿ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬೀದರ್, ವಿಜಯಪುರ (ಎಸ್ಸಿ), ಕಲಬುರಗಿ (ಎಸ್ಸಿ), ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬಳ್ಳಾರಿ(ಎಸ್ಟಿ), ರಾಯಚೂರು(ಎಸ್ಟಿ), ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ, ಪಕ್ಷೇತರರಾಗಿ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್ ಸ್ಪರ್ಧೆ ಮಾಡಿರುವುದರಿಂದ ಚುನಾವಣಾ ಕಣವು ರಂಗೇರಿದೆ. ಅದೇ ರೀತಿ ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಸಂಸದ ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು, ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೀದರ್ ನಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

 

Previous Post
ರಾಜತಾಂತ್ರಿಕ ಪಾಸ್‌ಪೊರ್ಟ್ ರದ್ದಿಗೆ ಕೋರ್ಟ್ ಆದೇಶ ಅಗತ್ಯ
Next Post
ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗವು ಸಿಂಬಲ್ ಲೋಡಿಂಗ್ ಯುನಿಟ್ ಕಾರ್ಯಾಚರಣೆ

Recent News