ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

ನವದೆಹಲಿ : ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ದೆಹಲಿಯಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಜೊತೆಗೂ ಮಾತುಕತೆ ನಡೆಸಿದ್ದಾರೆ.

ಈ ನಡುವೆ ಟಿಕೆಟ್ ಆಕಾಂಕ್ಷಿ, ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ದೆಹಲಿಯಲ್ಲಿ ಬಿಡು ಬಿಟ್ಟಿದ್ದು ಬಿಜೆಪಿ ಹಿರಿಯ ನಾಯಕರನ್ನು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಟಿಕೆಟ್ ಗಾಗಿ ಅವರು ಲಾಬಿ ನಡೆಸುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ.

ಕೇಂದ್ರ ನಾಯಕರ ಭೇಟಿ ಬಳಿಕ ಮಾತನಾಡಿದ ಬಿ.ವೈ ವಿಜಯೇಂದ್ರ, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಲ್ಲುವ ಧೈರ್ಯ ಡಿ.ಕೆ ಶಿವಕುಮಾರ್ ಮಾಡುವುದಿಲ್ಲ, ಲೋಕಸಭೆ ಚುನಾವಣೆಯಲ್ಲೂ ಚನ್ನಪಟ್ಟಣದಲ್ಲಿ ಬಿಜೆಪಿಗೆ ಲೀಡ್ ಬಂದಿದೆ. ಅವರದೇ ಪಕ್ಷದಲ್ಲಿ ಅವರನ್ನು ಸೆದೆಬಡಿಯುವ ಪ್ರಯತ್ನ ನಡೆಯುತ್ತಿದೆ ಈ ಹಂತದಲ್ಲಿ ರಿಸ್ಕ್ ತೆಗೆದುಕೊಳ್ಳಿವುದಿಲ್ಲ, ಅಭ್ಯರ್ಥಿ ಆಯ್ಕೆ ಬಗ್ಗೆ ಅಮಿತ್ ಶಾ ಮತ್ತು ಕುಮಾರಸ್ವಾಮಿ ಜೊತೆಗೆ ಚರ್ಚಿಸಿದೆ ಒಮ್ಮತ ಅಭ್ಯರ್ಥಿಯನ್ನು ಹಾಕಲಿದ್ದೇವೆ ಎಂದರು.

ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ, ಯಾರು ಸ್ಪರ್ಧಿಸಬೇಕು ಎನ್ನುವುದು ನಿರ್ಧಾರ ಮಾಡುತ್ತೇವೆ, ಬಿಜೆಪಿ -ಜೆಡಿಎಸ್ ಅನ್ನೋ ವಿಚಾರ ಅಲ್ಲಿ ಬರುವುದಿಲ್ಲ ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು.

ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿ, ಉಪ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ ಕೇಂದ್ರ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ, ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು ಅಲ್ಲಿವರೆಗೂ ಗೆಲುವಿಗೆ ನಾವು ತಯಾರಿ ಮಾಡಿಕೊಳ್ಳುತ್ತೇವೆ. ಸ್ಪರ್ಧೆ ಬಗ್ಗೆ ಬಹಪಾಲು ನಿರ್ಣಯ ಕುಮಾರಸ್ವಾಮಿ ಮಾಡುತ್ತಾರೆ ಅವರ ಆಶೀರ್ವಾದ ಇಲ್ಲದೆ ಏನು ಆಗಲ್ಲ

ನನಗೆ ಜೆಡಿಎಸ್ ಸಿಂಬಲ್ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ, ಎರಡು ಪಕ್ಷದ ನಾಯಕರು ಚರ್ಚೆ ಮಾಡಬೇಕು ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ಎನ್‌ಡಿಎ ನನ್ನ ಬೆಂಬಲವಿದೆ ವರಿಷ್ಠರು ಏನ್ ಹೇಳುತ್ತಾರೆ ಅದನ್ನು ಕೇಳುತ್ತೇನೆ ನಿಖಿಲ್ ಸ್ಪರ್ಧೆ ಮಾಡೊದಾದರೆ ನನ್ನ ಸಂಪೂರ್ಣ ಬೆಂಬಲ ಇದೆ ನಾನು ಯಾವುದೇ ಒಳಸಂಚು ಮಾಡುವುದಿಲ್ಲ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಕಾಂಗ್ರೆಸ್ ನಿಂದ ಡಿಕೆ ಶಿವಕುಮಾರ್ ಕುಟುಂಬದವರೆ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ ಅವರ ಕುಟುಂಬ ಸ್ಪರ್ಧಿಸಿದರೆ ದೊಡ್ಡ ಹೋರಾಟ ನಡೆಯಲಿದೆ. ಈ‌ ನಡುವೆ ವಾರದಲ್ಲಿ ಎರಡು ದಿನ ಚನ್ನಪಟ್ಟಣದಲ್ಲಿ ಶಿವಕುಮಾರ್ ಠಿಕಾಣಿ ಹೂಡುತ್ತಿದ್ದಾರೆ, ಹಿಂದೆ ಚನ್ನಪಟ್ಟಣಕ್ಕೆ ತಿರುಗಿನೋಡವರು ಮತ್ತೆ ಬಂದಿದ್ದಾರೆ. ಚನ್ನಪಟ್ಟಣದ ಮತದಾರು, ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಅಸಮಧಾನ ಇದೆ ಅದನ್ನು ಬಿಟ್ಟು ಚನ್ನಪಟ್ಟಣಕ್ಕೆ ಬಂದು ಉಪಚುನಾವಣೆ ಗೆದ್ದು ರಾಜ್ಯಗೆಲ್ಲಬೇಕು ಅಂದುಕೊಂಡಿದ್ದಾರೆ ಅದು ಸಾಧ್ಯವಿಲ್ಲ ಎಂದರು.

Previous Post
ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ
Next Post
ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ – ಹೆಚ್‌ಡಿಕೆ

Recent News