ಜಾಮೀನು ಕೋರಿ ಮನೀಶ್ ಸಿಸೋಡಿಯಾ ಹೈಕೋರ್ಟ್ ಮೊರೆ

ಜಾಮೀನು ಕೋರಿ ಮನೀಶ್ ಸಿಸೋಡಿಯಾ ಹೈಕೋರ್ಟ್ ಮೊರೆ

ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇಡಿ ) ಮತ್ತು ಕೇಂದ್ರೀಯ ತನಿಖಾ ದಳ ( ಸಿಬಿಐ ) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪಿಎಂಎಲ್‌ಎ ವಿಶೇಷ ನ್ಯಾಯಲಯ ರೋಸ್ ಅವೆನ್ನೂ ಕೋರ್ಟ್ ಎರಡನೇ ಸಾಮಾನ್ಯ ಜಾಮೀನು ಅರ್ಜಿ ವಜಾ ಮಾಡಿದ ಹಿನ್ನಲೆ ಮೇಲ್ಮನವಿ ಸಲ್ಲಸಿರುವ ಅವರು ವಿಧಾನಸಭೆ ಸದಸ್ಯನಾಗಿದ್ದು ಚುನಾವಣೆ ಹಿನ್ನಲೆ ತುರ್ತು ವಿಚಾರಣೆ ನಡೆಸುವಂತೆ ಇಂದು ಮನವಿ ಮಾಡಿದರು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವ ಭರವಸೆ ನೀಡಿದೆ.

ರೋಸ್ ಅವೆನ್ಯೂ ಕೋರ್ಟ್ ನಲ್ಲಿ ನಡೆದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ, ಇತರೆ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ಅವರು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋ ಮಾಡಿಕೊಳ್ಳಬಹುದು ಇದುವ ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು.

ಇಡಿ ಪರ ವಾದಿಸಿದ್ದ ಜೋಹೆಬ್ ಹೊಸೈನ್, ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ, ತನಿಖೆ ವಿಳಂಬ ಆರೋಪವನ್ನು ಒಪ್ಪಲು ಸಾಧ್ಯವಿಲ್ಲ, ಪ್ರಕರಣದ ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗುತ್ತಿದೆ, ಹಲವು ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಈ ಹಂತದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು‌. ತನಿಖಾ ಸಂಸ್ಥೆಗಳ ವಾದ ಪುರಷ್ಕರಿಸಿದ ಕೋರ್ಟ್, ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಎರಡನೇ ಸಾಮಾನ್ಯ ಅರ್ಜಿಯನ್ನು ವಜಾ ಮಾಡಿತ್ತು.

ಕಳೆದ ವರ್ಷ ಫೆಬ್ರವರಿ 26 ಮತ್ತು ಮಾರ್ಚ್ 9 ರಂದು ಮನೀಷ್ ಸಿಸೋಡಿಯಾ ಅವರನ್ನು ಕ್ರಮವಾಗಿ ಸಿಬಿಐ ಮತ್ತು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ, ಸಿಸೋಡಿಯಾ ಮತ್ತು ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ‘ಶಿಫಾರಸು’ ಮತ್ತು ‘ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ’ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

Previous Post
ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ತಪ್ಪಿದ ಟಿಕೆಟ್
Next Post
ಕಾಂಗ್ರೇಸ್ ಇಲ್ಲಿ ಸಾಯುತ್ತಿದೆ, ಪಾಕಿಸ್ತಾನ ಅಲ್ಲಿ ಅಳುತ್ತಿದೆ ಗುಜುರಾತ್ ನಲ್ಲಿ ಕೈ ವಿರುದ್ಧ ಮೋದಿ ವಾಗ್ದಾಳಿ

Recent News