ಜೂ. 24ರಿಂದ ಸಂಸತ್ ಅಧಿವೇಶನ

ಜೂ. 24ರಿಂದ ಸಂಸತ್ ಅಧಿವೇಶನ

ನವದೆಹಲಿ, ಜೂ. 11: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದೆ. ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ನಾಲ್ಕನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ. ನೂತನ ಸ್ಪೀಕರ್ ಆಯ್ಕೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮರುದಿನ, ರಾಷ್ಟ್ರಪತಿಗಳು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ಔಪಚಾರಿಕವಾಗಿ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನರೇಂದ್ರ ಮೋದಿ ಅವರು ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಎಲ್ಲಾ ಸಚಿವ ಸಂಪುಟ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದು, ಖಾತೆಗಳನ್ನು ಸಹ ಹಂಚಿಕೆ ಮಾಡಲಾಗಿದೆ

Previous Post
ಮೋದಿಗೆ ಜನ ವಿನಯವಂತಿಕೆಯ ಪಾಠ ಕಲಿಸಿದ್ದಾರೆ: ಗೌರವ್ ಗೊಗೊಯ್
Next Post
ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ 

Recent News