ದೆಹಲಿಯಂತೆ ಜೆಕೆ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ವರ್ಗಾವಣೆ, ನೇಮಕಾತಿ, ಯೋಜನೆಗಳ ಜಾರಿಗೆ ಬೇಕು ಅನುಮತಿ

ದೆಹಲಿಯಂತೆ ಜೆಕೆ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ವರ್ಗಾವಣೆ, ನೇಮಕಾತಿ, ಯೋಜನೆಗಳ ಜಾರಿಗೆ ಬೇಕು ಅನುಮತಿ

ನವದೆಹಲಿ : ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡಲು ಗೃಹ ವ್ಯವಹಾರಗಳ ಸಚಿವಾಲಯ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕೂಡ ಈಗ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ನಂತೆ ಆಡಳಿತಾತ್ಮಕ ಅಧಿಕಾರವನ್ನು ಪಡೆಯಲಿದ್ದಾರೆ.

ಹೊಸ ತಿದ್ದುಪಡಿ ಅನ್ವಯ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅನುಮತಿಯಿಲ್ಲದೆ ವರ್ಗಾವಣೆ, ನೇಮಕಾತಿ ಅಥಾವ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. 2019 ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯ ಸೆಕ್ಷನ್ 55 ರ ಅಡಿಯಲ್ಲಿ ತಿದ್ದುಪಡಿ ಮಾಡಿದ ನಿಯಮಗಳನ್ನು ಗೃಹ ಇಲಾಖೆ ಸೂಚಿಸಿದೆ ಇದರಲ್ಲಿ LG ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಹೊಸ ವಿಭಾಗಗಳನ್ನು ಸೇರಿಸಿದೆ‌.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಅಲ್ಲಿ ಚುನಾವಣೆ ನಡೆದಿಲ್ಲ, ಆದರೆ ಕೇಂದ್ರ ಚುನಾವಣಾ ಆಯೋಗ ಯಾವಾಗ ಬೇಕಾದರೂ ಚುನಾವಣೆ ನಡೆಸಬಹುದಾಗಿದ್ದು ಅಲ್ಲಿ ಸರ್ಕಾರ ರಚನೆಯಾಗಲಿದೆ. ಸರ್ಕಾರ ರಚನೆಗೂ ಮುನ್ನ ಲೆಫ್ಟಿನೆಂಟ್ ಗವರ್ನರ್‌ಗೆ ಚುನಾಯಿತ ಸರ್ಕಾರಕ್ಕಿಂತ ಹೆಚ್ಚಿನ ಅಧಿಕಾರವನ್ನು ಕೇಂದ್ರ ಸರ್ಕಾರ ನೀಡಿದೆ.

ಈ ನಿಯನದಿಂದ ದೆಹಲಿಯಲ್ಲಿ ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗರ್ವನರ್ ನಡುವೆ ಆಗ್ಗಾಗ್ಗೆ ಸಮರ ನಡೆಯುತ್ತಲೆ ಇರುತ್ತದೆ. ಲೆಫ್ಟಿನೆಂಟ್ ಗರ್ವನರ್ ಬದಲು ಜನರಿಂದ ಆಯ್ಕೆಯಾಗಿ ಬಂದ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು, ನೇಮಕಾತಿ, ವರ್ಗಾವಣೆ ಮತ್ತು ಯೋಜನೆಗಳ ಜಾರಿ ವಿಚಾರದಲ್ಲಿ ವಿಧಾನಸಭೆಗೆ ಹೆಚ್ಚು ಮಾನ್ಯತೆ ನೀಡಬೇಕು ಎಂದು ಈಗಾಗಲೇ ಆಪ್ ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ಮಾಡುತ್ತಿದೆ.

Previous Post
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ, ಜನಜೀವನ ಅಸ್ತವ್ಯಸ್ತ
Next Post
ಮಜ್ನು ಕಾ ಟೀಲಾ ಪ್ರದೇಶದಲ್ಲಿ ಕಟ್ಟಡಗಳ ತೆರವು ಶುರು

Recent News