ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ ಕೇಂದ್ರಕ್ಕೆ ಸುಪ್ರೀಂ ಚಾಟಿ

ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ ಕೇಂದ್ರಕ್ಕೆ ಸುಪ್ರೀಂ ಚಾಟಿ

ನವದೆಹಲಿ : ತಪ್ಪು ಮಾಹಿತಿಯ ಜಾಹೀರಾತುಗಳೊಂದಿಗೆ ಜನರ ದಾರಿ ತಪ್ಪಿಸುವ ಪತಂಜಲಿ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದವನ್ನು ಸುಪ್ರೀಂಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಯೋಗ ಗುರು ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಂಗ ನಿಂಧನೆ ಪ್ರಕರಣವನ್ನು ಏಪ್ರೀಲ್ 30 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.

ಇಂಡಿಯನ್ ಮೆಡಿಕಲ್ ಅಸೋಷಿಯನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಸಿದ ನ್ಯಾ.ಹೀಮಾ ಕೊಹ್ಲಿ ನೇತೃತ್ವದ ದ್ವಿ ಸದಸ್ಯ ಪೀಠ, ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು 1945 ರ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ನಿಯಮಗಳ 170 ನೇ ನಿಯಮದ ಅಡಿಯಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆಯುಷ್ ಸಚಿವಾಲಯವು 2023 ರಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಕಳುಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿತು.

ಇಂತಹ ಜಾಹೀರಾತುಗಳ ವಿರುದ್ಧ ನೀವು ಕ್ರಮ ಕೈಗೊಂಡಿದೆ ಎಂದು ರಾಜ್ಯ ಸಚಿವರು ಸಂಸತ್ತಿನಲ್ಲಿ ಉತ್ತರಿಸಿದ್ದರು. ಅಧಿಕಾರಿಗಳು ಆದಾಯವನ್ನು ನೋಡುವಲ್ಲಿ ನಿರತರಾಗಿದ್ದಂತೆ ತೋರುತ್ತಿದೆ ಎಂದು ನ್ಯಾ. ಕೊಹ್ಲಿ ಅಸಮಧಾನ ವ್ಯಕ್ತಪಡಿಸಿದರು. ಒಂದು ಸುದ್ದಿಟಿವಿಯಲ್ಲಿ ಆಂಕರ್ ಪತಂಜಲಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಏನಾಯಿತು ಎಂಬುದರ ಕುರಿತು ಓದುತ್ತಿದ್ದಾರೆ. ಇದೆ ಅವಧಿಯಲ್ಲಿ ಜಾಹೀರಾತು ಪತಂಜಲಿ ಕೂಡಾ ಚಾಲನೆಯಲ್ಲಿದೆ ಎಂತಹ ಪರಿಸ್ಥಿತಿ! ಎಂದು ನ್ಯಾ. ಅಮಾನುಲ್ಲಾ ಟೀಕಿಸಿದರು.

ಪತಂಜಲಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸರ್ಕಾರ ಹೇಗೆ ಪತ್ರ ಬರೆಯಿತು ಎಂಬುದನ್ನು ವಿವರಿಸಬೇಕು ಎಂದು ಹೇಳಿದ ಪೀಠ, ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಆಕ್ಟ್ ಮತ್ತು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಂತಹ ಕಾನೂನುಗಳ ಅನುಷ್ಠಾನವನ್ನು ಸೂಕ್ಷ್ಮವಾಗಿ ಗಮನಿಸಲು ನ್ಯಾಯಾಲಯ ನಿರ್ಧರಿಸಿದೆ.

ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ಪ್ರಭಾವಿತರಾಗಿ ಔಷಧಗಳನ್ನು ಸೇವಿಸುವ ಶಿಶುಗಳು ಮತ್ತು ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ. ನಾವು ನಿರ್ದಿಷ್ಟವಾಗಿ ಒಬ್ಬರ ಮೇಲೆ ಅರೋಪಿಸುತ್ತಿಲ್ಲ, ಗ್ರಾಹಕರು/ಸಾರ್ವಜನಿಕರನ್ನು ಹೇಗೆ ದಾರಿ ತಪ್ಪಿಸಲಾಗುತ್ತಿದೆ ಎಂಬುದರ ಕುರಿತು ಹೆಚ್ಚಿನ ಹಿತಾಸಕ್ತಿಯಾಗಿದೆ ಎಂದು ಎಂದು ನ್ಯಾಯಾಲಯ ವಿವರಿಸಿದೆ. ಅಲ್ಲದೇ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸಲು ನ್ಯಾಯಾಲಯ ನಿರ್ಧರಿಸಿದೆ.

Previous Post
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ಪರಿಗಣನೆಯಲ್ಲಿದೆ – ಚುಣಾನಣಾ ಆಯೋಗ
Next Post
ಮೋದಿ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಖಂಡನೆ

Recent News