ಬರ ಪರಿಹಾರ ಬಿಡುಗಡೆ ವಿಚಾರ ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ಬರ ಪರಿಹಾರ ಬಿಡುಗಡೆ ವಿಚಾರ ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ರಾಜ್ಯದ ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ನೀಡಿದ ಅಂತರ್ ಸಚಿವಾಲಯದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ ಸಂಜೀನ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಲಾಯಿತು.

ಇಂದಿನ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ ಅದಕ್ಕಾಗಿ ಧನ್ಯವಾದಗಳು ಆದರೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಕಡಿಮೆಯಾಗಿದೆ ಇದು ಅಸಮಂಜಸ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಪರ ವಾದಿಸಿದ ಅರ್ಟಾನಿ ಜನರಲ್ ಆರ್ ವೆಂಕಟರಮಣಿ, ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಿದೆ ಎಂದರು.

ಇದೇ ಅಂಶವನ್ನು ಪ್ರಸ್ತಾಪಿಸಿದ ಸಿಬಲ್, ರಾಜ್ಯಕ್ಕೆ ಆಗಮಿಸಿದ ತಜ್ಞರ ತಂಡದ ವರದಿ ಏನು ಎಂಬುದು ರಾಜ್ಯಕ್ಕೆ ತಿಳಿದಿಲ್ಲ, ಅದರ ಪ್ರತಿಯನ್ನು ರಾಜ್ಯಕ್ಕೆ ನೀಡಿಲ್ಲ ಹೀಗಾಗೀ ಆ ಪ್ರತಿಯನ್ನು ಕೋರ್ಟ್ ಮುಂದೆ ಇಡಬೇಕು ಅದರ ಅನ್ವಯ ಪರಿಹಾರ ನೀಡುವುದಕ್ಕೆ ನಮ್ಮದು ಯಾವುದೇ ತಕರಾರು ಇಲ್ಲ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಲು ಸಮಯ ಬೇಕು ಎಂದು ಅರ್ಟಾನಿ ಜನರಲ್ ಕೇಳಿದರು‌. ಇದಕ್ಕೆ ನಿರಾಕರಿಸಿದ ಪೀಠ, ಮುಂದಿನ ಸೋಮವಾರದೊಳಗೆ ವರದಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು.

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದ್ದು ಈ ಪರಿಹಾರ ಅತಂತ್ಯ ಕಡಿಮೆಯಾಗಿದೆ ಎಂದು ಈಗ ಮತ್ತೆ ತಕರಾರು ಎತ್ತಿದೆ.

Previous Post
ಧಾರ್ಮಿಕ ಅಂಶಗಳ ಉಲ್ಲೇಖಿಸಿ ಮತ ಕೇಳಿದ ಆರೋಪ ಚುನಾವಣೆಯಿಂದ ಪ್ರಧಾನಿ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Next Post
ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ ಪ್ರಧಾನಿ ನರೇಂದ್ರ ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

Recent News