ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಸಿಎಂ ಸಿದ್ಧರಾಮಯ್ಯ ಘೋಷಣೆ

ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಸಿಎಂ ಸಿದ್ಧರಾಮಯ್ಯ ಘೋಷಣೆ

ನವದೆಹಲಿ : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆಗೆ ಮಾತನಾಡಿದ್ದು ಅಗತ್ಯ ನೆರವು ನೀಡುವು ಭರವಸೆ ನೀಡಿದೆ ಎಂದರು‌. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಭರವಸೆ ನೀಡಿದರು.

ಕೇರಳ ತೆರಳಲು ಸಚಿವ ಸಂತೋಷ್ ಲಾಡ್‌ಗೆ ಸೂಚನೆ

ಈ ನಡುವೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಲು ಸೂಚನೆ ನೀಡಿದ್ದೇನೆ ಎಂದು ಸಿದ್ಧರಾಮಯ್ಯ ತಿಳಿಸಿದರು. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದು ಪ್ರಯಾಣ ಬೆಳೆಸಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.

Previous Post
ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಬಿಜೆಪಿ ಪಾದಯಾತ್ರೆ ಬಗ್ಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ಅತೃಪ್ತಿ
Next Post
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರು ಇಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ನವರನ್ನು ಸೌಹಾರ್ದಿತವಾಗಿ ಭೇಟಿ ಮಾಡಿದ

Recent News