ಮಹಿಳೆ ಅಪಹರಣ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬಂಧನ

ಮಹಿಳೆ ಅಪಹರಣ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬಂಧನ

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳ ತಂಡ ಬಂಧಿಸಿದೆ.ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿ ಕರೆದೊಯ್ದಿದೆ.ಪದ್ಮನಾಭನಗರದಲ್ಲಿರುವ ಹೆಚ್‍.ಡಿ. ದೇವೇಗೌಡರ ನಿವಾಸದಲ್ಲಿ ಹೆಚ್.ಡಿ. ರೇವಣ್ಣ ಇರುವ ಮಾಹಿತಿಯನ್ನು ಮೊದಲೇ ಕಲೆಹಾಕಿದ್ದ ಎಸ್‌ಐಟಿ ಅವರನ್ನು ಬಂಧಿಸಿದೆ. ಅವರ ಆರೋಗ್ಯ ತಪಾಸಣೆ ಬಳಿಕ ಎಸ್‌ಐಟಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುವುದು. 24 ಗಂಟೆಯೊಳಗೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಅದಕ್ಕಿಂತ ಮೊದಲು ಬಂಧನದ ಬಗ್ಗೆ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು.ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಿದ್ದಾರೆ.:ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್. ಡಿ. ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿ ನ್ಯಾಯಾಲಯ ಶನಿವಾರ ನಿರಾಕರಿಸಿದೆ. ಇದರ ಬೆನ್ನಲ್ಲೇ ಎಸ್ ಐಟಿ ರೇವಣ್ಣ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದೆ.ಒಂದೆಡೆ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಅಧಿಕಾರಿಗಳ ತಂಡ ಹಲವು ಗಂಟೆಗಳ ಕಾಲ ಕಾದು ನಿವಾಸಲ್ಲಿದ್ದ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.ಲೈಂಗಿಕ ಟೇಪ್‌ಗಳಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯ ಪೈಕಿ ತನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವಕ ಪೊಲೀಸರಿಗೆ ದೂರು ನೀಡಿದ ನಂತರ ಗುರುವಾರ ಹೆಚ್‌.ಡಿ. ರೇವಣ್ಣ ಅವರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲಾಗಿತ್ತು.ಪೊಲೀಸರ ಪ್ರಕಾರ, ಮಹಿಳೆಯನ್ನು ಹುಣಸೂರಿನಲ್ಲಿ ಪತ್ತೆಹಚ್ಚಲಾಗಿದ್ದು, ಅವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Previous Post
ಕೋಟೆಯಲ್ಲಿರುವ ಚಕ್ರವರ್ತಿಗೆ ಜನರ ಕಷ್ಟಗಳು ಗೊತ್ತಿಲ್ಲ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕ ಟೀಕೆ
Next Post
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ, ನಿರುದ್ಯೋಗಿಗಳ ಖಾತೆಗೂ ಒಂದು ಲಕ್ಷ ಜಮೆ:ಸಿ.ಎಂ

Recent News