ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ ಮೇಕೆದಾಟು ಚರ್ಚೆಗೆ ಸಿದ್ಧ : ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ ಮೇಕೆದಾಟು ಚರ್ಚೆಗೆ ಸಿದ್ಧ : ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ, ಜುಲೈ 29: ಮಳೆ ಸುರಿಯುತ್ತಿರುವುದರಿಂದ ಕಾವೇರಿ ನೀರು ಬಿಡಲಾಗುತ್ತಿದ್ದು, ಮೆಟ್ಟೂರು ಜಲಾಶಯ ತುಂಬಿಹೋಗುವ ಸಾಧ್ಯತೆಯಿದೆ. ನೀರು ವ್ಯರ್ಥವಾಗುವುದನ್ನು ತಪ್ಪಿಸಲು ತಮಿಳುನಾಡಿನ ಜೊತೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ. ಆದರೆ ತಮಿಳುನಾಡಿನವರು ಮಾತುಕತೆಗೆ ಸಿದ್ಧರಿಲ್ಲ ಎಂದು ಹೇಳಿದರು. ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು ತೆಗೆಯುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ  ಕಾರ್ಯಕ್ರಮವನ್ನು  ಉದ್ದೇಶಿಸಿ ಮಾತನಾಡಿದರು ಈ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದು ಸಾಧಾರಣ ವರ್ಷದಲ್ಲಿ ಜಲಾಶಯಗಳು ತುಂಬಿದ  ಸಂದರ್ಭದಲ್ಲಿ 177.25 ಟಿಎಂಸಿ ನೀರನ್ನು ಕೊಡಬೇಕೆಂದಿದೆ. 2022-2023ರಲ್ಲಿ ಸುಮಾರು 665 ಟಿಎಂಸಿ ನೀರು ಹರಿದಿದೆ. ಈ ವರ್ಷವೂ ಕೂಡ ಹೆಚ್ಚು ಹೋಗುವ ಸಾಧ್ಯತೆಯಿದೆ. ಈಗಾಗಲೇ 83. ಟಿಎಂಸಿ ಗೂ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗಿದೆ. ಸಂಕಷ್ಟದ ವರ್ಷದಲ್ಲಿ ಅಷ್ಟು ನೀರನ್ನು ಕೊಡಲು ಸಾಧ್ಯವಿಲ್ಲ. ಈ ವರ್ಷ ಹೆಚ್ಚು ನೀರನ್ನು ಕೊಡಲಾಗುವುದು. ಸಮುದ್ರಕ್ಕೆ ಸೇರುವ ಹೆಚ್ಚುವರಿ ನೀರನ್ನು ತಡೆಹಿಡಿಯಲು ಬ್ಯಾಲೆಂನ್ಸಿಂಗ್ ರಿಸರ್ವಾಯರ್ ಕಟ್ಟಿದರೆ ನಮಗಿಂತ ಜಾಸ್ತಿ ತಮಿಳುನಾಡಿಗೆ ಅನುಕೂಲವಾಗುತ್ತದೆ ಎಂದರು.

ಕೇಂದ್ರದಿಂದ ಮಂಜೂರಾತಿ ಕೊಡಿಸಲು ಒತ್ತಾಯಿಸಬೇಕು:

ಕೇಂದ್ರ ಸರ್ಕಾರ ಈ ಯೋಜನೆಗೆ ಮಂಜೂರಾತಿಯನ್ನು ಕೊಟ್ಟಿಲ್ಲ. ಮಂಜೂರಾತಿ ಕೊಡಿ ಎಂದರೆ ವಿರೋಧ ಪಕ್ಷದವರು ಇದನ್ನು ವಿರೋಧಿಸುತ್ತಾರೆ. ಮಂಡ್ಯ ಲೋಕಸಭಾ ಸದಸ್ಯರು ಇದಕ್ಕೆ ಒಪ್ಪಿಗೆ ಕೊಡಿಸುವ ಕೆಲಸ ಮಾಡಿದರೆ ಸುಮಾರು 65 ಟಿಎಂಸಿ ನೀರನ್ನು ಹಿಡಿದಿಡಲು ಹಾಗೂ ವಿದ್ಯುತ್ ಉತ್ಪಾಸದಿಲು ಸಾಧ್ಯವಾಗಲಿದೆ. ಬೆಂಗಳೂರಿಗೆ ಕುಡಿಯುವ ನೀರು ಹಾಗೂ ನೀರು  ಹಿಡಿದಿರುವುದರಿಂದ ಮಳೆ ಬಾರದೇ ಜಲಾಶಯಗಳು ತುಂಬದೇ ಹೋದ ಸಂದರ್ಭಗಳಲ್ಲಿ ತಮಿಳುನಾಡಿಗೆ ನೀರು ಕೊಡಲೂ ಸಾಧ್ಯವಾಗಲಿದೆ.  ನಾವು ಈ ಬಗ್ಗೆ ಪಾದಯಾತ್ರೆಯನ್ನೂ ಮಾಡಿದ್ದೇವೆ. ನಮ್ಮ ಮೇಲೆ ಪ್ರಕರಣವನ್ನೂ ದಾಖಲಿಸಿದ್ದಾರೆ. ಮಳೆ ಸರಿಯಾಗಿ ಆದಾಗ ಮಾತ್ರ ತಮಿಳುನಾಡು 177.25 ನೀರನ್ನು ಪಡೆಯಲು ಅರ್ಹರು. ಕೊರತೆಯಾದರೆ ಹಂಚಿಕೆ ಮಾಡಿಕೊಳ್ಳಬೇಕಾಗುತ್ತದೆ. ಇದು ನಮ್ಮ ಹಕ್ಕು. ಇದನ್ನು ನ್ಯಾಯಮಂಡಲಿ ಹಾಗೂ ಸರ್ವೋಚ್ಛ ನ್ಯಾಯಾಲಯವೂ ಹೇಳಿದೆ. ಇದಕ್ಕೆ ತಮಿಳುನಾಡು ಅನಗತ್ಯವಾಗಿ ತಕರಾರು ಮಾಡುತ್ತಿದ್ದಾರೆ. ಇದರ ಬಗ್ಗೆ ಕರ್ನಾಟಕದ ಲೋಕಸಭಾ ಸದಸ್ಯರು ಒಂದು ದಿನವೂ ಮಾತನಾಡುವುದಿಲ್ಲ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ನಾವು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Previous Post
ಮೇಧಾ ಪಾಟ್ಕರ್‌ಗೆ ವಿಧಿಸಿದ್ದ ಜೈಲು ಶಿಕ್ಷೆ ಅಮಾನತು
Next Post
ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

Recent News