ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!

ಹೊಸ ದಿಲ್ಲಿ, ಮಾರ್ಚ್‌ 02: 2024ರ ಲೋಕಸಭಾ ಚುನಾವಣೆಗೆ ಭರದ ಸಿದ್ದತೆ ನಡೆಸುತ್ತಿರುವ ಬಿಜೆಪಿ, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರ ಹೆಸರನ್ನ ಪ್ರಕಟಿಸಿದೆ. 2024 ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನ ಅಂತಿಮಗೊಳಿಸುವ ಸಂಬಂಧ ಬಿಜೆಪಿ ಹೈಕಮಾಂಡ್ ನಿರಂತರ ಸಭೆಗಳನ್ನು ನಡೆಸಿದ್ದು, ದಿಲ್ಲಿಯಲ್ಲಿ ಪ್ರಧಾನಿ ಮೋದಿ ಅವರ ನಿವಾಸದಲ್ಲಿ ಫೆಬ್ರವರಿ 29 ಗುರುವಾರ ರಾತ್ರಿ 11 ಗಂಟೆಗೆ ಆರಂಭವಾದ ಸಭೆ, ಶುಕ್ರವಾರ ಬೆಳಗಿನ ಜಾವ 4 ಗಂಟೆವರೆಗೆ ನಿರಂತರವಾಗಿ ನಡೆಯಿತು ಎಂದು ಹೇಳಲಾಗಿದೆ. ಈ ಸಭೆಯಲ್ಲಿ ಪ್ರತಿಯೊಬ್ಬ ಸಂಸದರ ಕ್ಷೇತ್ರಗಳಿಂದಲೂ ಹಲವು ಮೂಲಗಳಿಂದ ಮಾಹಿತಿ ಕಲೆ ಹಾಕಲಾಗಿದೆ. ಇನ್ನೂ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಪ್ರತಿ ಕ್ಷೇತ್ರದಲ್ಲಿ ಇರುವ ತಳಮಟ್ಟದ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ಅಭಿಪ್ರಾಯಗಳನ್ನು ಆಲಿಸಲಾಗಿದೆ.

ಬಿಜೆಪಿ ಮೊದಲ ಪಟ್ಟಿದಲ್ಲಿ 195 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನ ಘೋಷಿಸಿದ್ದು, 28 ಮಹಿಳೆಯವರಿಗೆ ಟಿಕೆಟ್‌ ನೀಡಿದ್ದು, ಮೊದಲ ಪಟ್ಟಿಯಲ್ಲಿ ಕೇವಲ ಘಟಾನುಘಟಿ ನಾಯಕರಿಗೆ ಟಿಕೆಟ್‌ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾರಾಣಸಿಯಿಂದ ಸ್ಪರ್ಧೆ ನಡೆಸಲಿದ್ದಾರೆ. ಇನ್ನೂ ಈ ಬಾರೀ 50 ವರ್ಷದ ಒಳಗಿನ ಯುವ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್ ನೀಡಲಾಗಿದೆ.

Previous Post
ಬಿಜೆಪಿಯ ಚುನಾವಣಾ ಬಾಂಡ್‌ ವಂಚನೆ ಪ್ರಕರಣ: ದೂರು ಹಿಂಪಡೆದ ಜಡ್ಜ್‌
Next Post
ಗುರುದಾಸ್‌ಪುರದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ – ಯುವರಾಜ್‌ ಸಿಂಗ್ ಸ್ಪಷ್ಟನೆ

Recent News