ಶೋಕಾಸ್ ನೋಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ:ಮುಖ್ಯಮಂತ್ರಿ ಸಿದ್ದರಾಮಯ್ಯ

ಶೋಕಾಸ್ ನೋಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 02: ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟೀಸನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಟಿ. ಜೆ.ಅಬ್ರಹಾಂ ಅವರು ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಸಲಹೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ  ಕಾರಣ ಕೇಳಿ ನೋಟೀಸು ನೀಡಿರುವ ಬಗ್ಗೆ ಅವರು ಇಂದು ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು.

ರಾಜ್ಯಪಾಲರ ಶೋಕಾಸ್ ನೊಟೀಸ್ ವಿಷಯ ಕುರಿತು ಪ್ರತಿಕ್ರಿಯಿಸಿ, ನಿನ್ನೆ ರಾತ್ರಿ ಸಂಪುಟ ನಿರ್ಣಯ ಕಳಿಸಲು ತೀರ್ಮಾನಿಸಲಾಗಿದೆ ಎಂದರು.  ರಾಜ್ಯಪಾಲರು ಯಾವುದೇ ನಿರ್ಧಾರ ಕೈಗೊಳ್ಳಲಿ. ಅದನ್ನು ಎದುರಿಸಲು ನಾವು ಸಿದ್ಧವಾಗಿದ್ದೇವೆ. ಕಾನೂನು ಹೋರಾಟ ನಡೆಸಲು ನ್ಯಾಯಾಂಗದ ಮೊರೆ ಹೋಗಬೇಕಾಗುತ್ತದೆ ಎಂದು ಹೇಳಿದರು.   ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತ ಗೊಂದಲ ಬಗೆಹರಿಸಿದೆ. ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ, ಸದಾಶಿವ  ಆಯೋಗದ ವರದಿ ಜಾರಿ ಬಗ್ಗೆ ಚರ್ಚಿಸುತ್ತೇವೆ. ಒಳ ಮೀಸಲಾತಿ ನೀಡಲು ಪ್ರಯತ್ನಿಸ್ತೇವೆ ಎಂದು ಭರವಸೆ ನೀಡಿದರು.

Previous Post
ಸಿದ್ದರಾಮಯ್ಯ ವಿರುದ್ದ ಬಿಜೆಪಿ ಜೆಡಿಎಸ್ ಷಡ್ಯಂತ್ರ; ಹಿಂದುಳಿದ ವರ್ಗಗಳಿಂದ ಎಚ್ಚರಿಕೆ ಸಮಾವೇಶ.
Next Post
ಚುನಾವಣಾ ಬಾಂಡ್‌ಗಳ ಅಮಾನ್ಯ ಮರುಪರಿಶೀಲನಾ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Recent News