ಸಿಎಎ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ IUML ಅರ್ಜಿ

ಸಿಎಎ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ IUML ಅರ್ಜಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ ಬೆನ್ನಲೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸುಪ್ರೀಂಕೋರ್ಟ‌್‌ಗೆ ಅರ್ಜಿ ಸಲ್ಲಿಸಿದ್ದು ಅನುಷ್ಠಾನವನ್ನು ತಡೆ ಹಿಡಿಯುವಂತೆ ನಿರ್ದೇಶನ ನೀಡಲು ಮನವಿ ಮಾಡಿದೆ‌. ಪೌರತ್ವ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ, ತಾರತಮ್ಯ ವಿಶೇಷವಾಗಿ ಮುಸ್ಲಿಮರ ವಿರುದ್ಧ ಎಂದು ಅರ್ಜಿಯಲ್ಲಿ ಅದು ವಾದಿಸಿದೆ.

2019 ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ CAA ಯನ್ನು IUML ಪ್ರಶ್ನಿಸಿತು, ಈಗ ನಿಯಮಗಳಿಗೆ ತಡೆ ನೀಡಲು‌ ಮತ್ತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 11, 2019 ರಂದು ಸಿಎಎ ಅನ್ನು ಸಂಸತ್ತು ಅಂಗೀಕರಿಸಿತು ಮತ್ತು ಮರುದಿನ ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು. ಅದೇ ದಿನ ಐಯುಎಂಎಲ್ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಸಿಎಎ ಮತ್ತು ನಿಯಮಗಳು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್ 31, 2014 ರಂದು ಅಥವಾ ಅದಕ್ಕಿಂತ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಜೈನರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಪಾರ್ಸಿಗಳಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿವೆ. CAA 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 2 ಅನ್ನು ತಿದ್ದುಪಡಿ ಮಾಡುತ್ತದೆ, ಇದು ಅಕ್ರಮ ವಲಸಿಗರನ್ನು ವ್ಯಾಖ್ಯಾನಿಸುತ್ತದೆ.

ಹೊಸ ಕಾನೂನು ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ನಿಬಂಧನೆಯಿಂದ ಹೊರಗಿಡುತ್ತದೆ, ಇದು ದೇಶಾದ್ಯಂತ ಪ್ರತಿಭಟನೆಗಳಿಗೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಕಾರಣವಾಗಿದೆ‌. ಸದ್ಯ ಕಾನೂನನ್ನು ಪ್ರಶ್ನಿಸಿ ಅರ್ಜಿದಾರರು ಸಿಎಎ ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ತಾರತಮ್ಯವನ್ನುಂಟುಮಾಡುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ‌.

Previous Post
ವಿವಿಗಳಲ್ಲಿ ಮೋದಿ ಭಾಷಣ ಪ್ರಸಾರ, ಪೊಸ್ಟರ್ ಗೆ ಯುಜಿಸಿ ನಿರ್ದೇಶನ
Next Post
ಚುನಾವಣೆ ಗೆಲ್ಲುವ ಹತಾಶ ಪ್ರಯತ್ನ, ತರಾತುರಿಯಲ್ಲಿ ಸಿಎಎ ಜಾರಿ – ಕಮಲ್ ಹಾಸನ್

Recent News