ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ 3.0 ಸರ್ಕಾರದ ಮೊದಲ ಬಜೆಟ್ 

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಮಹಿಳೆಯರಿಗೆ 3 ಲಕ್ಷ ಕೋಟಿಗೂ ಹೆಚ್ಚು ಅನುದಾನ ನೀಡಿದ್ದಾರೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ ಬಜೆಟ್ನಲ್ಲಿ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಿನಿಯೋಗಿಸಿದೆ ಎಂದು ಹಣಕಾಸು ಸಚಿವರು ಹೇಳಿದರು. ಕೈಗಾರಿಕಾ ಕಾರ್ಮಿಕರಿಗೆ ವಸತಿ ನಿಲಯದ ಸೌಲಭ್ಯ ಸಿಗಲಿದೆ. ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಗೆ ಹಿಂದುಳಿದ ಪ್ರದೇಶಗಳ ಅನುದಾನವನ್ನು ಒದಗಿಸಲಾಗುವುದು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ಗಳನ್ನು ನಿರ್ಮಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ವರ್ಕಿಂಗ್ ವುಮನ್ ಹಾಸ್ಟೆಲ್ಗಳನ್ನು ಸ್ಥಾಪಿಸುತ್ತದೆ. ನಿರ್ಮಲಾ ಸೀತಾರಾಮನ್ ಉದ್ಯೋಗ, ಕೌಶಲ್ಯ, MSME ಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್ ಕೇಂದ್ರೀಕರಿಸುತ್ತದೆ.ಮಧ್ಯಂತರ ಬಜೆಟ್ನಲ್ಲಿ ಉಲ್ಲೇಖಿಸಿರುವಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಕೇಂದ್ರೀಕರಿಸಬೇಕಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Previous Post
ಜನಗಣತಿ ಬಗ್ಗೆ ಪ್ರಸ್ತಾಪಿಸದ ಬಜೆಟ್: ಕಾಂಗ್ರೆಸ್ ತರಾಟೆ
Next Post
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆ

Recent News